ಸೌಲಭ್ಯದ ಬಗ್ಗೆ ಅರಿವು ಮೂಡಿಸಿ

Published on

ಬಳ್ಳಾರಿ ; ಜಿಲ್ಲೆಯಲ್ಲಿನ ತಂಬಾಕು ವ್ಯಸನ ಮುಕ್ತ ಕೇಂದ್ರದ ಸೌಲಭ್ಯದ ಕುರಿತು ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಹೇಳಿದರು.

ನಗರದ ಡಿಎಚ್‌ಒ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ತಂಬಾಕು ನಿಯಂತ್ರಣ ಘಟಕ ಸಹಯೋಗದೊಂದಿಗೆ ಜಿಲ್ಲಾಮಟ್ಟದ ಆರೋಗ್ಯ ಕಾರ್ಯಕರ್ತರಿಗೆ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರವು ತಂಬಾಕು ನಿಯಂತ್ರಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿದೆ. ತಂಬಾಕು ಸೇವನೆಗೆ ಒಳಗಾಗಿರುವ ಜನರಿಗೆ ತಂಬಾಕು ವ್ಯಸನ ಮುಕ್ತ ಕೇಂದ್ರ, ಅದರಲ್ಲಿ ಸಿಗುವ ಆಪ್ತಸಮಾಲೋಚನೆ, ಉಚಿತ ಎನ್‌ಆರ್‌ಟಿ ಚಿಕಿತ್ಸೆ ಸೌಲಭ್ಯಗಳ ಕುರಿತು ಸಮುದಾಯದಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net