ಪಂಚಮಿತ್ರ ಯೋಜನೆಯ ಜಾಗೃತಿ ಮೂಡಿಸಿ

7
Published on

ಮೈಸೂರು: ಸರ್ಕಾರ ಸಾರ್ವಜನಿಕ ಬಳಕೆಗಾಗಿ ಪಂಚಮಿತ್ರ ಯೋಜನೆ ಬಗ್ಗೆ ಜಾಗೃತಿ ಮೂಡಿಸಿ ಎಂದು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ನಿರ್ದೇಶಕಿ ಲಕ್ಷ್ಮೀಪ್ರಿಯಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮಾನಸ ಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಮೈಸೂರು ವಿವಿ ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗದ ವತಿಯಿಂದ ಬುಧವಾರ ಆಯೋಜಿಸಿದ್ದ 2023-24ನೇ ಶೈಕ್ಷಣಿಕ ಸಾಲಿನ ಯೋಜನಾ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಹಂತದಲ್ಲಿ ಯಾವ್ಯಾವ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ? ಅವುಗಳು ಯಾವ್ಯಾವ ಹಂತದಲ್ಲಿವೆ? ಫಲಾನುಭವಿಗಳು ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ವಿಚಾರಗಳ ಮಾಹಿತಿಯನ್ನು ಪಂಚಮಿತ್ರ ಯೋಜನೆಗೆ ಸಂಬಂಧಿಸಿದ ಜಾಲತಾಣದಲ್ಲಿ ಪಡೆದುಕೊಳ್ಳಬಹುದಾಗಿದೆ. ಗ್ರಾಮದ ಎಲ್ಲರಿಗೂ ಅದರ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಪಂಚಮಿತ್ರ ಸೇವೆ ಗ್ರಾಮ ಪಂಚಾಯಿತಿಗಳ ಸಾರ್ವಜನಿಕ ಮಾಹಿತಿ ವೇದಿಕೆಯಾಗಿದೆ. ಸಾರ್ವಜನಿಕರು, ಚುನಾಯಿತ ಪ್ರತಿನಿಧಿಗಳು, ಪಂಚಾಯಿತಿ ಸಿಬ್ಬಂದಿ, ಸಭೆಯ ನಡಾವಳಿಗಳು, ಪಂಚಾಯಿತಿ ಆದಾಯ ಮತ್ತು ಬಜೆಟ್ ವಿವರಗಳು, ಮುಂಬರುವ ಸಭೆಗಳ ಮಾಹಿತಿ ಸೇರಿದಂತೆ ಇತ್ಯಾದಿಗಳಿಗೆ

ಸಂಬಂಧಿಸಿದ ಸಾರ್ವಜನಿಕ ಮಾಹಿತಿಯನ್ನು ಇದರಿಂದ ಪಡೆಯಬಹುದಾಗಿದೆ ಎಂದರು.
ಮೈಸೂರು ವಿವಿ ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಎಂ.ಮಹೇಶ್, ಪ್ರೊ.ನವೀತಾ ತಿಮ್ಮಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net