ಜನರಲ್ಲಿ ನೀರಿನ ಬಳಕೆ ಜಾಗೃತಿ ಮೂಡಿಸಿ

24 KAMPLI 04
ಕಂಪ್ಲಿಯಲ್ಲಿ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಪಂಚಾಯತ್‌ರಾಜ್ ಇಲಾಖೆ ಸಹಾಯಕ ನಿರ್ದೇಶಕಿ ಅಪರಂಜಿ ಚಾಲನೆ ನೀಡಿದರು. ಪ್ರಮುಖರಾದ ಡಾ.ಅಚ್ಯುತರಾವ್, ಕವಿತಾ, ತಿಪ್ಪೇಸ್ವಾಮಿ, ಕೆ.ಎಚ್.ಶಶಿಕಾಂತ ಇದ್ದರು.
Published on

ಕಂಪ್ಲಿ; ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತಾಲೂಕು ಪಂಚಾಯಿತಿಯಿಂದ ಕುಡಿವ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ತರಬೇತಿ ಕಾರ್ಯಾಗಾರವನ್ನು ಸೋಮವಾರ ಆಯೋಜಿಸಲಾಗಿತ್ತು.

ಇಲಾಖೆ ಸಂಪನ್ಮೂಲ ವ್ಯಕ್ತಿ ಡಾ.ಅಚ್ಯುತರಾವ್‌ಮಾತನಾಡಿ, ತಾಲೂಕಿನ ಎಲ್ಲ ಗ್ರಾಮಗಳಲ್ಲಿ ನಿರಂತರವಾಗಿ ಶುದ್ಧ ನೀರು ಪೂರೈಸಬೇಕಿದೆ. ನೀರನ್ನು ಸಮರ್ಥವಾಗಿ ಬಳಸಿಕೊಳ್ಳುವ ಜಾಣ್ಮೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.

ಪಂಚಾಯತ್‌ರಾಜ್ ಸಹಾಯಕ ನಿರ್ದೇಶಕಿ ಅಪರಂಜಿ ಮಾತನಾಡಿ, ಜೆಜೆಎಂ ಕಾಮಗಾರಿಯನ್ನು ಒಂಬತ್ತು ತಿಂಗಳೊಳಗೆ ಮುಗಿಸಬೇಕಿದೆ. ಕಾಮಗಾರಿ ತ್ವರಿತಗತಿಯಲ್ಲಿ ಪೂರೈಸುವಂತೆ ಗುತ್ತಿಗೆದಾರರ ಮೇಲೆ ನಿಗಾವಹಿಸಿ. ಕಾಮಗಾರಿ ವಿಳಂಬವಾದಲ್ಲಿ ಸಾಮಾನ್ಯ ಸಭೆಯಲ್ಲಿ ಚರ್ಚಿಸಬೇಕು. ಅಗತ್ಯಬಿದ್ದರೆ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಜಲಜೀವನ್ ಮಿಷನ್ ಯೋಜನೆಯ ಉದ್ದೇಶ, ಗುರಿ, ನೀರಿನ ಕಾರ್ಯಾಚರಣೆ, ನಿರ್ವಹಣೆ, ನಿರಂತರ ನೀರು ಸರಬರಾಜು ಕುರಿತು ಸಮಗ್ರ ಮಾಹಿತಿ ನೀಡಲಾಯಿತು. ಹಂಪಾದೇವನಹಳ್ಳಿ ಗ್ರಾಪಂ ಅಧ್ಯಕ್ಷೆ ಕವಿತಾ, ಜಿಲ್ಲಾ ಯೋಜನಾ ವ್ಯವಸ್ಥಾಪಕ ತಿಪ್ಪೇಸ್ವಾಮಿ, ಪಿಡಿಒ ಕೆ.ಎಚ್.ಶಶಿಕಾಂತ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net