ಸೇವೆಯ ಮೂಲಕ ಜಾಗೃತಿ ಮೂಡಿಸಿ

ಸೇವೆಯ ಮೂಲಕ ಜಾಗೃತಿ ಮೂಡಿಸಿ
Published on

ಯಳಂದೂರು: ಸೇವೆಯ ಮೂಲಕ ವಿದ್ಯಾರ್ಥಿಗಳು ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಸಲಹೆ ನೀಡಿದರು.

ತಾಲೂಕಿನ ಬಿಳಿಗಿರಿಂಗನ ಬೆಟ್ಟದಲ್ಲಿ ಇತ್ತೀಚೆಗೆ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ದಾರಿ ದೀಪವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಶಿಬಿರ ಆಯೋಜನೆಯಿಂದ ಪಟ್ಟಣದ ವಿದ್ಯಾರ್ಥಿಗಳಿಗೆ ಇಲ್ಲಿನ ಸಂಸ್ಕೃತಿ ಅರಿಯಲು ಸಹಕಾರಿ ಎಂದರು. ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಜನರಲ್ಲಿ ಆರೋಗ್ಯ, ಶುಚಿತ್ವ ಇನ್ನಿತರ ಕಾರ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು. ಉಪನ್ಯಾಸಕ ಎನ್.ಚೇತನ್ ಶಿಬಿರದ ಕುರಿತು ಮಾಹಿತಿ ನೀಡಿದರು.
ಶಿಕ್ಷಕರಾದ ಸರ್ವಮಂಗಳಾ, ವೇಣು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net