ಮಹಿಳಾ, ಮಕ್ಕಳ ದೌರ್ಜನ್ಯ ತಡೆಗೆ ಜಾಗೃತಿ ಕೈಗೊಳ್ಳಿ

WhatsApp Image 2024-09-17 at 1.23.42 PM
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ, ಬಾಲ್ಯವಿವಾಹ, ಲೈಂಗಿಕ ಶೋಷಣೆ ಹಾಗೂ ಸಾಗಾಟ ತಡೆಗಟ್ಟಲು ಶಾಲೆ- ಕಾಲೇಜುಗಳಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರೌಢಾವಸ್ಥೆಯಲ್ಲಿ ಆಗುವ ಬದಲಾವಣೆಗಳು, ಮುಟ್ಟು ಹಾಗೂ ಗುಡ್ ಟಚ್, ಬ್ಯಾಡ್ ಟಚ್ ಹಾಗೂ ಪೋಕ್ಸೊ ಕಾಯ್ದೆ ಕುರಿತು ಪ್ರಚಾರ ಕೈಗೊಳ್ಳಬೇಕು. ಬಾಲ್ಯವಿವಾಹಗಳನ್ನು ತಡೆಯಲು ಗ್ರಾಮ ಸಭೆಗಳಲ್ಲಿ ಜಾಗೃತಿ ಮೂಡಿಸಬೇಕು.
ಹೆಚ್ಚುವರಿ ಪೊಲೀಸ್ ವರಿಷ್ಠಾಽಕಾರಿ ಎನ್.ವಿ. ಭರಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಡಾ. ಎಚ್.ಎಚ್. ಕುಕನೂರ, ಜಿಲ್ಲಾ ಪಂಚಾಯಿತಿ ಯೋಜನಾಽಕಾರಿ ದೀಪಕ ಮಡಿವಾಳರ, ಡಿಎಚ್‌ಒ ಡಾ. ಶಶಿ ಪಾಟೀಲ ಹಾಗೂ ವಿವಿಧ ಇಲಾಖೆಗಳ ಅಽಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net