ಮಕ್ಕಳಲ್ಲಿ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸಿ

MLA Bheemanna Naik Talking
Published on

ಶಿರಸಿ: ಪರಿಸರದ ಸಂರಕ್ಷಣೆ ಕುರಿತು ಜಾಗೃತಿ ಬಾಲ್ಯದಿಂದಲೇ ಬರಬೇಕು. ಈ ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ತಾಲೂಕು ಮಟ್ಟದ 14ವರ್ಷ ವಯೋಮಿತಿ ಒಳಗಿನ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳ ದೈಹಿಕ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆಗಳು ಅತ್ಯಗತ್ಯ. ಕ್ರೀಡಾ ಕ್ಷೇತ್ರದಲ್ಲಿ ಪಾಲ್ಗೊಂಡಾಗ ಮಾನಸಿಕವಾಗಿಯೂ ವಿದ್ಯಾರ್ಥಿಗಳು ಪ್ರಬಲರಾಗುತ್ತಾರೆ ಎಂದರು.

ಡಿಡಿಪಿಐ ಪಿ ಬಸವರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ, ಜೆಎಂಜೆ ಶಾಲೆಯ ಮುಖ್ಯಾಧ್ಯಾಪಕಿ ಸಿಸ್ಟರ್ ಫಿಲೊಜೊಸೆಫ್, ಸಿಸ್ಟರ್ ಅಮಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net