ಕೃತಕ ಅಭಾವ ಸೃಷ್ಟಿಸಿ ಅಧಿಕ ಬೆಲೆಗೆ ಮಾರಾಟ

ಮಾನ್ವಿ ಸಹಾಯಕ ಕೃಷಿ ನಿರ್ದೇಶಕ ಗುರುನಾಥ ಭೂಸನೂರ ಅವರಿಗೆ ಕರ್ನಾಟಕ ದಲಿತ ರಕ್ಷಣ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಕಾಶಿನಾಥ ಕುರ್ಡಿ, ಪ್ರಮುಖರಾದ ತಿಪ್ಪಣ್ಣ ಜಾನೆಕಲ್, ಬುಡ್ಡಪ್ಪ ಕರೇಗುಡ್ಡ, ನರಸರೆಡ್ಡಿ, ನರಸಿಂಹ ಸೀಕಲ್, ರಮೇಶನಾಯಕ್, ಶರಣು ಇದ್ದರು.

Published on

ಮಾನ್ವಿ: ರಸಗೊಬ್ಬರ ಅಂಗಡಿಗಳಲ್ಲಿ ದರಪಟ್ಟಿ ಹಾಗೂ ದಾಸ್ತಾನು ಪಟ್ಟಿ ಹಾಕಬೇಕು. ರೈತರಿಗೆ ಸುಲಭವಾಗಿ ರಸಗೊಬ್ಬರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಗುರುನಾಥ ಭೂಸನೂರಗೆ ಕರ್ನಾಟಕ ದಲಿತ ರಕ್ಷಣಾ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು.

ಕರವೇ ಜಿಲ್ಲಾಧ್ಯಕ್ಷ ಕಾಶಿನಾಥ ಕುರ್ಡಿ ಮಾತನಾಡಿ, ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಸೂರ್ಯಕಾಂತಿ, ಹತ್ತಿ, ಮೆಣಸಿನ ಹಾಗೂ ವಿವಿಧ ಸಸಿಗಳನ್ನು ನಾಟಿ ಮಾಡಿದ್ದಾರೆ. ಉತ್ತಮ ಇಳುವರಿಗೆ ಗೊಬ್ಬರದ ಅವಶ್ಯವಿದ್ದು, ಮಾನ್ವಿ ಹಾಗೂ ಸಿರವಾರ ತಾಲೂಕಿನ ಗೊಬ್ಬರ ಮಾರಾಟಗಾರರು ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಸಂಗ್ರಹಿಸಿ ರೈತರಿಗೆ ಗೊಬ್ಬರದ ಕೃತಕ ಅಭವ ಸೃಷ್ಟಿಸಿ ಮಾರುಕಟ್ಟೆಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಡಿಎಪಿ ಯೂರಿಯಾ ಜತೆ ಜಿಂಕ್ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದರಿಂದ ಕೃಷಿ ವೆಚ್ಚ ಹೆಚ್ಚಾಗುತ್ತಿದೆ. ರೈತರಿಗೆ ರಸಗೊಬ್ಬರ ಸುಲಭವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಲೂಕು ಸಹಾಯಕ ಕೃಷಿ ನಿರ್ದೇಶಕ ಗುರುನಾಥ ಭೂಸನೂರ ಮಾತನಾಡಿ, ರೈತರಿಗೆ ಸುಲಭವಾಗಿ ರಸಗೊಬ್ಬರ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net