ಹಲವಾರು ಸಮಸ್ಯೆ ಸೃಷ್ಟಿ

ಸಂಡೂರು ತಾಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮವನ್ನು ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಧೀಶ ದೇವರೆಡ್ಡಿ ಉದ್ಘಾಟಿಸಿದರು. ತಹಸೀಲ್ದಾರ್ ಅನಿಲ್ ಕುಮಾರ್, ತಾಪಂ ಇಒ ಎಸ್.ಷಡಕ್ಷರಯ್ಯ, ವಕೀಲರ ಸಂಘದ ಅಧ್ಯಕ್ಷ ಅರಳಿಮಲ್ಲಪ್ಪ ಇತರರಿದ್ದರು..
ಸಂಡೂರು ತಾಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮವನ್ನು ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಧೀಶ ದೇವರೆಡ್ಡಿ ಉದ್ಘಾಟಿಸಿದರು. ತಹಸೀಲ್ದಾರ್ ಅನಿಲ್ ಕುಮಾರ್, ತಾಪಂ ಇಒ ಎಸ್.ಷಡಕ್ಷರಯ್ಯ, ವಕೀಲರ ಸಂಘದ ಅಧ್ಯಕ್ಷ ಅರಳಿಮಲ್ಲಪ್ಪ ಇತರರಿದ್ದರು..
Published on

ಸಂಡೂರು: ಮತದಾನದ ವೇಳೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆಮಾಡಬೇಕು ಎಂದು ಹಿರಿಯ ವಕೀಲ ಆರ್.ವೀರೇಶಪ್ಪ ಹೇಳಿದರು.

ಪಟ್ಟಣದ ತಾಲೂಕು ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರಿಯಾದ ನಾಯಕನನ್ನು ಆಯ್ಕೆ ಮಾಡದಿದ್ದರೆ ಹಲವಾರು ಸಮಸ್ಯೆ ಸೃಷ್ಟಿಯಾಗುತ್ತದೆ. ಮತದಾನ ಮಾಡುವಾಗ ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಸೇರಿ ಸರ್ಕಾರದ ದಾಖಲೆಗಳು ಕಡ್ಡಾಯವಾಗಿ ತರಬೇಕು. ಚುನಾವಣೆ ವ್ಯವಸ್ಥೆಯಲ್ಲಿ ವಿದ್ಯಾವಂತರೇ ಹೆಚ್ಚಿರುವ ಬೆಂಗಳೂರು, ದೋಣಿಮಲೈ, ಜಿಂದಾಲ್ ಸೇರಿ ವಿವಿಧ ಪಟ್ಟಣಗಳಲ್ಲಿ ಶೇ.35ರಿಂದ 40 ಜನ ಮಾತ್ರ ಮತದಾನ ಮಾಡುತ್ತಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದರು.

ಸಂಡೂರು ಜೆಎಂಎಫ್‌ಸಿ ನ್ಯಾಯಾಧೀಶ ದೇವರೆಡ್ಡಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತ ಹಾಕುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು. ಮತದಾರರ ದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು.

ಉಪಾಧ್ಯಕ್ಷ ಕೆ.ಆರ್.ದಾದಾ ಖಲಂದರ್, ಕಾರ್ಯದರ್ಶಿ ಎಚ್.ಕುಮಾರಸ್ವಾಮಿ, ಮಂಜುನಾಥ ಗೌಡ, ಬಿಇಒ ಡಾ.ಐ.ಆರ್.ಅಕ್ಕಿ, ವಕೀಲರಾದ ಟಿ.ಎಂ.ಶಿವಕುಮಾರ್, ಎಂ.ಅಂಜಿನಿ, ಕಣ್ಣಿ ಕುಮಾರಸ್ವಾಮಿ, ಅಂಜನಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net