ಪರಿಶ್ರಮದಿಂದ ಹೊಸ ಚರಿತ್ರೆ ಸೃಷ್ಟಿ

11gan7-1
Published on

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ

ಸೋಲುಗಳ ಬಗ್ಗೆ ಚಿಂತಿಸುತ್ತ ಕೂರುವುದರ ಬದಲು ಮುಂದಿನ ಗೆಲುವುಗಳ ಬಗ್ಗೆ ಯೋಜನೆ ಹಾಕಿಕೊಳ್ಳಬೇಕು. ಛಲ, ಬದ್ಧತೆ, ಪರಿಶ್ರಮದಿಂದ ಹೊಸ ಚರಿತ್ರೆ ಸೃಷ್ಟಿಸಲು ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಹೇಳಿದರು.

ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಮೇಲ್ ಗಂಗೊಳ್ಳಿಯ ಡಾ.ಅಂಬೇಡ್ಕರ್ ಭವನದಲ್ಲಿ ಭಾನುವಾರ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗಂಗೊಳ್ಳಿ ಗ್ರಾಪಂ ಸದಸ್ಯ ಚಂದ್ರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಉಪ ವಲಯ ಅರಣ್ಯಾಧಿಕಾರಿ ಕೆ.ಸದಾಶಿವ ಶುಭ ಹಾರೈಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 2ನೇ ರ‌್ಯಾಂಕ್ ಗಳಿಸಿದ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಸುಶ್ಮಿತಾ ಎಸ್.ಗಾಣಿಗ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಅಗ್ರಸ್ಥಾನಿ ಕ್ಷಮಾ ಆರ್.ಆಚಾರ್ಯ, ಪಿಯುಸಿಯಲ್ಲಿ ಉತ್ತಮ ಸಾಧನೆಗೈದ ಜಯಶ್ರೀ, ಜ್ಯೋತಿಕಾ, ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಗಳಿಸಿದ ರಿಷಿಕೇಶ, ಜ್ಯೋತಿಕಾ, ಸಂಜನಾ ಖಾರ್ವಿ, ಭಾಸ್ಕರ ಅವರನ್ನು ಸನ್ಮಾನಿಸಲಾಯಿತು. ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಕಲಿಕಾ ಸಾಮಗ್ರಿ ವಿತರಿಸಲಾಯಿತು.

ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷ ತಬ್ರೇಜ್, ಕೆನರಾ ಬ್ಯಾಂಕ್ ನಿವೃತ್ತ ಉದ್ಯೋಗಿ ಪ್ರಮೋದ್ ಗಾಣಿಗ, ಅಂಬೇಡ್ಕರ್ ಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಕಂಚುಗೋಡು, ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಅಧ್ಯಕ್ಷೆ ಸುಮಿತ್ರಾ ಈಶ್ವರ್, ಅರ್ಚನ ಮಹಿಳಾ ಮಂಡಲ ಅಧ್ಯಕ್ಷೆ ಜ್ಯೋತಿ ಆನಂದ ಉಪಸ್ಥಿತರಿದ್ದರು. ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ಗೌರವಾಧ್ಯಕ್ಷ ಈಶ್ವರ ಜಿ. ಸ್ವಾಗತಿಸಿದರು. ಶಂಕರ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net