ವನ್ಯಜೀವಿಗಳ ನಿಯಂತ್ರಣಕ್ಕೆ ಆನೆ, ಚಿರತೆ ಕಾರ್ಯಪಡೆ ರಚನೆ

13
Published on

ಮೈಸೂರು: ಮೈಸೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ, ಆನೆ ಹಾಗೂ ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ನಿಯಂತ್ರಣಕ್ಕಾಗಿ ಮೈಸೂರು ವೃತ್ತದಲ್ಲಿ ಚಿರತೆ ಕಾರ್ಯಪಡೆ ಹಾಗೂ ಹುಣಸೂರು ವ್ಯಾಪ್ತಿಯಲ್ಲಿ ಆನೆ ಕಾರ್ಯಪಡೆಯನ್ನು ರಚಿಸಲಾಗಿದೆ.

ಚಿರತೆ ಮತ್ತು ಆನೆ ಕಾರ್ಯಪಡೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಅರಣ್ಯ ಇಲಾಖೆ ವತಿಯಿಂದ ಬುಧವಾರ ಇಲವಾಲದ ಅರಣ್ಯ ರಕ್ಷಕರ ತರಬೇತಿ ಕೇಂದ್ರದಲ್ಲಿ ಚಿರತೆ ಮತ್ತು ಆನೆಗಳ ರಕ್ಷಣೆ ಹಾಗೂ ನಿರ್ವಹಣೆ ಸಂಬಂಧ ಕಾರ್ಯಾಗಾರ ಆಯೋಜಿಸಲಾಗಿತ್ತು.

ಕಾರ್ಯಾಗಾರದಲ್ಲಿ ಚಿರತೆ ಕಾರ್ಯಪಡೆಯ 45 ಸಿಬ್ಬಂದಿ ಹಾಗೂ ಆನೆ ಕಾರ್ಯಪಡೆಯ 32 ಹೊರಗುತ್ತಿಗೆ ನೌಕರರು, 20 ಮುಂಚೂಣಿ ಸಿಬ್ಬಂದಿ ಹಾಗೂ ಬೀದರ್ ವಿಭಾಗದ ಇಬ್ಬರು ಉಪ ವಲಯ ಅರಣ್ಯಾಧಿಕಾರಿಗಳು ಭಾಗವಹಿಸಿದ್ದರು.

ಅರಣ್ಯ ಸಂರಕ್ಷಣಾಧಿಕಾರಿ ಡಾ.ಮಾಲತಿಪ್ರಿಯಾ ಕಾರ್ಯಾಗಾರ ಉದ್ಘಾಟಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ.ಬಸವರಾಜು, ಸೀಮಾ, ಪಶುವೈದ್ಯಾಧಿಕಾರಿ ಡಾ.ಮದನ್ ಕೊಂಪಾಲ್ ಕಾರ್ಯಾಗಾರ ನಡೆಸಿಕೊಟ್ಟರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲಕ್ಷ್ಮೀಕಾಂತ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net