ಶ್ರಾವಣ ಗೋಷ್ಠಿಗಳಿಂದ ಧಾರ್ಮಿಕ ಭಾವ ಸೃಷ್ಟಿ

27 HKR 7
Published on

ಹಿರೇಕೆರೂರ: ಶ್ರಾವಣ ಮಾಸದಲ್ಲಿ ಕಸಾಪ ವತಿಯಿಂದ ನಡೆಯುತ್ತಿರುವ ಗೋಷ್ಠಿಗಳು ಸಾಮಾನ್ಯ ಜನರಲ್ಲಿ ಧಾರ್ಮಿಕ ಭಾವನೆ ಬೆಳೆಸುವ ಜತೆಗೆ ಶಾಂತಿ, ನೆಮ್ಮದಿ ತರುತ್ತಿವೆ ಎಂದು ಸರ್ವಜ್ಞ ಸ್ಮಾರಕ ಸಮಿತಿ ಅಧ್ಯಕ್ಷ ಎಸ್.ಎಸ್. ಪಾಟೀಲ ಹೇಳಿದರು.

ಪಟ್ಟಣದ ಸಿಇಎಸ್ ವಿದ್ಯಾ ಸಂಸ್ಥೆಯ ಆವರಣದಲ್ಲಿ ತಾಲೂಕು ಕಸಾಪ ವತಿಯಿಂದ ಸೋಮವಾರ ಏರ್ಪಡಿಸಿದ್ದ ಶ್ರಾವಣ ಸಂಜೆಯ ನಾಲ್ಕನೇ ಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ಯು.ಬಿ. ಬಣಕಾರ ಮಾತನಾಡಿ, ಶ್ರಾವಣ ಮಾಸದಲ್ಲಿ ಹಳ್ಳಿಗಳಲ್ಲಿ ಜನರು ಅತ್ಯಂತ ಭಕ್ತಿಯಿಂದ ದೇವರನ್ನು ಪೂಜಿಸಿ, ಪುರಾಣ-ಪ್ರವಚನ ಏರ್ಪಡಿಸುವುದರ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡುತ್ತಾರೆ ಎಂದರು.

ಉಪನ್ಯಾಸಕ ಡಾ.ಮಂಜುನಾಥ ಸುಳಗನ್ನಿ ಅವರು 12ನೇ ಶತಮಾನದ ಶರಣರ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮೌಲ್ಯಗಳ ಕುರಿತು ಮಾತನಾಡಿದರು.

ಪ್ರಾಚಾರ್ಯ ಡಾ.ಎಸ್.ಬಿ. ಚನ್ನಗೌಡ್ರ, ಸಂಸ್ಥೆಯ ಆಡಳಿತಾಧಿಕಾರಿ ವೀರಭದ್ರಯ್ಯ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಎಸ್.ಬಿ.ತಿಪ್ಪಣ್ಣನವರ, ಪಪಂ ಅಧ್ಯಕ್ಷೆ ಸುಧಾ ಚಿಂದಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬುರುಡಿಕಟ್ಟಿ, ಈರಣ್ಣ ಬಣಕಾರ, ಕಸಾಪ ಗೌರವ ಕೋಶಾಧ್ಯಕ್ಷ ಮಹೇಂದ್ರ ಬಡಳ್ಳಿ, ಬಿಇಒ ಎನ್ ಶ್ರೀಧರ, ಬಿಇಡಿ ಕಾಲೇಜ್ ಪ್ರಾಚಾರ್ಯ ಬಿ.ಪಿ. ಹಳ್ಳೇರ, ಕಸಾಪ ಕಾರ್ಯದರ್ಶಿ ಪಿ.ಎಸ್. ಸಾಲಿ, ಎಂ.ಎಂ. ಮತ್ತೂರ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net