ಕ್ರಿಯೇಟಿವ್ ಸಂಸ್ಥೆಯ ಅಶ್ವತ್ ಎಸ್.ಎಲ್.ಗೆ ಸನ್ಮಾನ

blm (2)
Published on

ಕಾರ್ಕಳ: ಕೊಪ್ಪ ತಾಲೂಕು ಒಕ್ಕಲಿಗರ ಸಂದ ವಾರ್ಷಿಕ ಮಹಾಸಭೆಯಲ್ಲಿ ಆಯೋಜಿಸಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಅಶ್ವತ್ ಎಸ್.ಎಲ್. ಅವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ವಾತನಾಡಿದ ಅಶ್ವತ್, ನನ್ನ ಸಾಧನೆಗೆ ಮಲೆನಾಡಿನ ಪರಿಸರ ಮತ್ತು ಜನರ ಪ್ರೇರಣೆಯೇ ಕಾರಣ. ಮುಂದಿನ ದಿನಗಳಲ್ಲಿ ಈ ಭಾಗದಲ್ಲೇ ಉತ್ತಮ ಶಿಕ್ಷಣ ಸಂಸ್ಥೆ ನಿರ್ಮಿಸುವ ಕನಸು ಇದೆ. ಆರೋಗ್ಯ ಮತ್ತು ಶಿಕ್ಷಣ ಸೇವೆಯಲ್ಲಿ ಸಮುದಾಯ ತೊಡಗಿಸಿಕೊಳ್ಳುವುದು ವಾದರಿಯಾಗಬೇಕು. ಎಲ್ಲರೊಳಗೂ ಒಂದಾಗಿ ಬದುಕಬೇಕು ಎಂದರು.

ಶಾಸಕ ಟಿ.ಡಿ.ರಾಜೇಗೌಡ, ರಾಜೀವ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಬಿ.ಸಿ.ಭಗವಾನ್, ತಾಲೂಕು ಒಕ್ಕಲಿಗರ ಸಂ ಅಧ್ಯಕ್ಷ ಸಹದೇವ್ ಬಾಲಕೃಷ್ಣ, ಉಪಾಧ್ಯಕ್ಷ ಎಚ್.ಜೆ.ರಾಜಗೋಪಾಲ್ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net