ಸ್ಪರ್ಧೆಗಳಲ್ಲಿ ಭಾಗಿಯಾದರೆ ಅರಿವು ಹೆಚ್ಚಳ : ಡಾ.ರವೀಶ್ ಪಡುಮಲೆ ಸಲಹೆ

sdm
Published on

ಬೆಳ್ತಂಗಡಿ: ವಿದ್ಯಾರ್ಥಿಗಳಾಗಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ. ಆಗ ಹೆಚ್ಚು ತಿಳಿದುಕೊಳ್ಳಬಹುದು ಎಂದು ಉಜಿರೆ ಎಸ್.ಡಿ.ಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಮತ್ತು ಸಹ ಪ್ರಾಧ್ಯಾಪಕ ಡಾ.ರವೀಶ್ ಪಡುಮಲೆ ಹೇಳಿದರು.

ಎಸ್.ಡಿ.ಎಂ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘದ ವತಿಯಿಂದ ಆಯೋಜಿಸಿದ ಕ್ರೆಸಿಟಾ ಫೆಸ್ಟ್ ಗುರುವಾರ ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ.ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ಪ್ರತಿಯೊಬ್ಬರು ಜೀವನದಲ್ಲಿ ಒಂದು ನಿರ್ದಿಷ್ಟ ಗುರಿಯನ್ನು ಇಟ್ಟುಕೊಳ್ಳುವುದು ಅತ್ಯಗತ್ಯ. ಗುರಿಯನ್ನು ಸಾಧಿಸುವುದು ಸುಲಭದ ಮಾತಲ್ಲ ಎಂದರು.

ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದಕುಮಾರಿ ಕೆ.ಪಿ, ವಿದ್ಯಾರ್ಥಿ ಪ್ರತಿನಿಧಿ ಜಿ.ವಿ.ಚಂದನಾ ಸೇರಿದಂತೆ ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಚಂದ್ರಿಕಾ ಸ್ವಾಗತಿಸಿದರು. ವಿದ್ಯಾರ್ಥಿನಿ ಸಿಂಧು ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net