

ಮಡಿಕೇರಿ:
ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಮತ್ತು ಚಿಲ್ ಬಾಯ್ಸ್ ಮಡಿಕೇರಿ ವತಿಯಿಂದ 20ನೇ ವರ್ಷದ ಮುಸ್ಲಿಂ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಸೋಮವಾರದಿಂದ (ಫೆ.10) ಫೆ. 16ರ ವರೆಗೆ ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಚಿಲ್ ಬಾಯ್ಸ್ ಸಂಸ್ಥೆಯ ಅಧ್ಯಕ್ಷÀ ಎಂ.ಎ.ಉನೈಸ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಈಗಾಗಲೇ ತಂಡಗಳು ಹೆಸರು ನೋಂದಾಯಿಸಿಕೊAಡಿದ್ದು, ಸೋಮವಾರ ಬೆಳಗ್ಗೆ 9 ಗಂಟೆಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಅಬ್ದುಲ್ ರಶೀದ್ ಎಡಪಾಲ, ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಖಾದರ್ ಹಾಕತ್ತೂರು, ಪ್ರಧಾನ ಕಾರ್ಯದರ್ಶಿ ಆದಂ ಎಸ್, ಉದ್ಯಮಿಗಳಾದ ಟಿ.ಪಿ. ಮಂಜೇಶ್, ಮಕ್ಬೂಲ್, ಸುಂಟಿಕೊಪ್ಪ ಯುವ ಕಾಂಗ್ರೆಸ್ ಮುಖಂಡ ಹರ್ಷದ್ ಲತೀಫ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಸಮಾರೋಪ ಸಮಾರಂಭ ಫೆ.16 ರಂದು ನಡೆಯಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅಂತಿಮ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭಾ ಸದಸ್ಯ ಅಮೀನ್ ಮೊಹಿಸಿನ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಮಡಿಕೇರಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನುಸರತ್ ಪಾಷಾ ರೌಫ್, ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಉಪಾಧ್ಯಕ್ಷ ಸಿ.ಎ.ರಾಝಿಕ್, ಹಾಲುಗುಂದ ಗ್ರಾ.ಪಂ ಸದಸ್ಯ ಹನೀಫ್, ಉದ್ಯಮಿ ಹಾಗೂ ಸಮಾಜ ಸೇವಕ ಕೆ.ಎಂ.ಗಣೇಶ್ ಮತ್ತಿತರÀರು ಉಪಸ್ಥಿತರಿರುವರು.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು. ಅಲ್ಲದೆ ಆಯ್ದ ಕೆಲವು ಬಡ ಕುಟುಂಬಗಳಿಗೆ ಚಿಲ್ ಬಾಯ್ಸ್ ವತಿಯಿಂದ ಸಹಾಯಧನ ನೀಡಲಾಗುವುದು. ಇದೇ ಸಂದರ್ಭ ಸಾರ್ವಜನಿಕರಿಗೆ ಉಚಿತವಾಗಿ ನೀಡಲು ಉದ್ದೇಶಿಸಿರುವ ಆಕ್ಸಿಜನ್ ಯಂತ್ರವನ್ನು ಉದ್ಘಾಟಿಸಲಾಗುವುದು.
ಪಂದ್ಯಾವಳಿಯಲ್ಲಿ ಮೊದಲ ಸ್ಥಾನ ಗಳಿಸುವ ತಂಡಕ್ಕೆ ರೂ.1ಲಕ್ಷ, ದ್ವಿತೀಯ ರೂ.50 ಸಾವಿರ, ತೃತೀಯ ರೂ.20 ಸಾವಿರ, ನಾಲ್ಕನೇ ರೂ.10 ಸಾವಿರ ಹಾಗೂ ಇದರೊಂದಿಗೆ ಆಕರ್ಷಕ ಟ್ರೋಫಿಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಉತ್ತಮ ದಾಂಡಿಗ, ಉತ್ತಮ ಕೀಪರ್, ಉತ್ತಮ ಬೌಲರ್, ಶಿಸ್ತುಬದ್ಧ ತಂಡ ಮತ್ತು ವಿವಿಧ ವೈಯುಕ್ತಿಕ ಪ್ರಶಸ್ತಿಗಳನ್ನು ನೀಡಲಾಗುವುದು. ಪ್ರದರ್ಶನ ಪಂದ್ಯಾಟ ಕೊಡಗು ಪತ್ರಕರ್ತರ ಸಂಘ ಹಾಗೂ ಚಿಲ್ ಬಾಯ್ಸ್ ತಂಡದ ನಡುವೆ ನಡೆಯಲಿದೆ.