ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡದಗಿದ್ದವರ ಬಂಧನ

Betting
Published on

ಮಂಗಳೂರು: ನಗರದ ಪಿ.ಎಂ. ರಾವ್ ರಸ್ತೆಯಲ್ಲಿರುವ ಲಾಡ್ಜ್ನಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪದಲ್ಲಿ ಇಬ್ಬರನ್ನು ಬಂದರು ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ.

ಮಂಗಳೂರು ನಗರ ನಿವಾಸಿ ಹರಿಪ್ರಸಾದ್ ಮತ್ತು ಶಶಿಧರ ಬಂಧಿತರು. ಬಂಧಿತರಿಂದ 1.20 ಲಕ್ಷ ರೂ. ನಗದು, 6 ಮೊಬೈಲ್ ಫೋನ್ ಮತ್ತು ಒಂದು ಟಿವಿ ವಶಪಡಿಸಿಕೊಳ್ಳಲಾಗಿದೆ. ಲಾಡ್ಜ್‌ನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಐವರು ಪರಾರಿಯಾಗಿದ್ದಾರೆ. ಪರಾರಿಯಾದವರ ವಿವರ ಲಭ್ಯವಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಎರಡು ದಿನಗಳ ಹಿಂದೆ ಕಾರ್‌ಸ್ಟ್ರೀಟ್‌ನಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ 11 ಮಂದಿಯನ್ನು ಬಂದರು ಹಾಗೂ ಸಿಸಿಬಿ ಪೊಲೀಸರು ಬಂಧಿಸಿದ್ದರು. ನಗರದಲ್ಲಿ ಬೆಟ್ಟಿಂಗ್ ದಂಧೆ ಅವ್ಯಾಹತವಾಗಿದ್ದು, ಅದನ್ನು ತಡೆಗಟ್ಟುವಂತೆ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಆಯುಕ್ತ ವಿಕಾಶ್ ಕುಮಾರ್ ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net