

ಮೈಸೂರು: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಇತ್ತೀಚೆಗೆ ಬಂಧಿಸಿದ ಸಿಸಿಬಿ ಪೊಲೀಸರು 20,870 ರೂ. ನಗದು ಹಾಗೂ ಮೊಬೈಲ್ ವಶಕ್ಕೆ ಪಡೆದಿದ್ದಾರೆ.
ವಿದ್ಯಾರಣ್ಯಪುರಂ 2ನೇ ಮುಖ್ಯರಸ್ತೆಯ ಫ್ರೂಟ್ ಪ್ಯಾರಡೈಸ್ ಹಣ್ಣಿನ ಅಂಗಡಿಯ ಮೇಲೆ ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿ ದಾಳಿ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಲಾಯಿತು. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.