

ಉಡುಪಿ: ಭಾರತ ಪ್ರಸಿದ್ಧ ಕ್ರಿಕೆಟ್ ಆಟಗಾರ ರವಿಶಾಸ್ತ್ರಿ ಮಂಗಳವಾರ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ಮತ್ತು ಮುಖ್ಯಪ್ರಾಣ ದೇವರ ದರ್ಶನ ಮಾಡಿ, ಪರ್ಯಾಯ ಶ್ರೀಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀಪಾದರ ಮುಖ್ಯ ಯೋಜನೆಗಳಲ್ಲೊಂದಾದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವಯಂ ಸ್ಪೂರ್ತಿಯಿಂದ ಭಕ್ತರಿಗೆ ಭಗವದ್ಗೀತೆ ಬರೆಯುವಂತೆ ಸಂದೇಶ ನೀಡಿದರು. ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ವಾದಿರಾಜ ಪೆಜತ್ತಾಯ, ಲಾತವ್ಯ ಆಚಾರ್ಯ, ವಿನಯ ಬನ್ನಂಜೆ ಉಪಸ್ಥಿತರಿದ್ದರು.