ಯುವಜನತೆಯಿಂದ ಆಗಲಿ ಸಮಾಜ ಸೇವೆ : ಶ್ರೀನಿವಾಸ ಭಟ್ ಕರೆ

New Project (41)
Published on

ಪುತ್ತೂರು ಗ್ರಾಮಾಂತರ: ಗ್ರಾಮೀಣ ಪ್ರದೇಶದ ಯುವ ಜನತೆ ಸಂಘಟಿತರಾಗಿ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳನ್ನು ಮಾಡುವ ಮೂಲಕ ಗ್ರಾಮದ ಅಭಿವೃದ್ಧಿ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಸಿ.ಎಚ್ ಚಂದುಕೂಡ್ಲು ಹೇಳಿದರು.

ಬಡಗನ್ನೂರು ಗ್ರಾಮದ ಕೊಯಿಲ ಶಾಲಾ ವಠಾರದಲ್ಲಿ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಭಾನುವಾರ ನಡೆದ ಅಶೋಕ ಜನಮನ-ಟ್ರೋಫಿ ನಿಗದಿತ ಓವರ್‌ಗಳ ಸೂಪರ್ ಸಿಕ್ಸ್ (7ಜನರ) ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಬಡಗನ್ನೂರು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸಂತೋಷ್ ಆಳ್ವ ಗಿರಿಮನೆ ಮಾತನಾಡಿ, ಕ್ರೀಡೆ ಮನುಷ್ಯನ ಆರೋಗ್ಯ ದೃಷ್ಟಿಯಿಂದ ಹೆಚ್ಚು ಮಹತ್ವಪೂರ್ಣವಾಗಿದೆ. ಯುವ ಜನತೆ ಕ್ರೀಡೆಯಲ್ಲಿ ಆಸಕ್ತಿ ತೋರುವ ಜತೆಗೆ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದರು.

ಬಡಗನ್ನೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ, ಉಪಾಧ್ಯಕ್ಷೆ ಸುಶೀಲಾ ಪಕ್ಯೋಡ್ ಮಾತನಾಡಿದರು. ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಪ್ರಕಾಶ್ ರೈ ಕೊಯಿಲ, ಕೊಯಿಲ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ಗೌಡ ಪಕ್ಯೋಡ್, ಮಾಜಿ ಅಧ್ಯಕ್ಷ ಸತೀಶ್ ನಾಯ್ಕ ಸಿ.ಎಚ್, ಉದ್ಯಮಿ ಪ್ರವೀಣ್ ಕುಮಾರ್ ಮುಡಿಪಿನಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರಾದ ಜಗನ್ನಾಥ ಗೌಡ ಪಕ್ಯೋಡ್, ಕೌಸಿಕ್ ಪಕ್ಯೋಡ್, ಪ್ರದೀಪ್, ಭರತ್ ರೈ, ವಿನೀತ್ ರೈ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕ ಬಾಲಕೃಷ್ಣ ಪೊರ್ದಾಲ್ ಸ್ವಾಗತಿಸಿ ನಿರೂಪಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯ ನವೀನ್ ಪಕ್ಕಳ ಕೊಯಿಲ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net