ಮತ ಜಾಗೃತಿಗೆ ಕ್ರಿಕೆಟ್​ ಪಂದ್ಯಾವಳಿ

31 vikram 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್​ ಸಮಿತಿ ವತಿಯಿಂದ ನಗರದ ಕೆಸಿಡಿ ಮೈದಾನದಲ್ಲಿ ಭಾನುವಾರ ಕ್ರಿಕೆಟ್​ ಪಂದ್ಯಾವಳಿ ಆಯೋಜಿಸಲಾಗಿತ್ತು.
ಪಂದ್ಯಾವಳಿಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಇದ್ದಂತೆ. ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವ ಸುಭದ್ರಗೊಳಿಸಬೇಕು. ನಗರ ಪ್ರದೇಶದಲ್ಲಿ ಕಡಿಮೆ ಪ್ರಮಾಣದ ಮತದಾನ ಆಗುತ್ತಿದ್ದು, ಸುಶಿಕ್ಷಿತರು ತಪ್ಪದೆ ಮತ ಚಲಾಯಿಸಬೇಕು. ಕ್ರಿಕೆಟ್​ ಆಡುವ ಮೂಲಕ ವಿನೂತನವಾಗಿ ಮತ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಪಂ ಸಿಇಒ ಸ್ವರೂಪ ಟಿ.ಕೆ. ಮಾತನಾಡಿ, ಈ ಬಾರಿ ಶೇ. 75ರಷ್ಟು ಮತದಾನ ಆಗುವ ನಿಟ್ಟಿನಲ್ಲಿ ಅನೇಕ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ ಎಂದರು.
ಪೊಲೀಸ್​ ಆಯುಕ್ತೆ ರೇಣುಕಾಸುಕುಮಾರ, ಎಸ್ಪಿ ಡಾ. ಗೋಪಾಲ ಬ್ಯಾಕೋಡ್​, ಜಿಪಂ ಯೋಜನಾಧಿಕಾರಿ ದೀಪಕ ಮಡಿವಾಳರ, ನೌಕರರ ಸಂಘದ ಅಧ್ಯಕ್ಷ ಎಸ್​.ಎ್​. ಸಿದ್ದನಗೌಡರ, ವಿವಿಧ ಇಲಾಖೆ ಅಧಿಕಾರಿಗಳು, ಇತರರು ಇದ್ದರು.
ಹಾಡುಗಳನ್ನು ಪ್ರಸ್ತುತಪಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಪಂದ್ಯಾವಳಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ತಂಡ, ಪೊಲೀಸ್​, ಗ್ರಾಮೀಣ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ಮಾಧ್ಯಮ ಸೇರಿ ವಿವಿಧ ಇಲಾಖೆಗಳ ತಂಡಗಳು ಭಾಗಹಿವಹಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net