ಹೊಳೆನರಸೀಪುರ: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ಣ ಕಾಲೇಜು ಮೈದಾನದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರ ಮುತ್ತುರಾಜ್ ನೇತೃತ್ವದಲ್ಲಿ ಪಿವೈಕೆ ಗ್ರೂಪ್ ವತಿಯಿಂದ ರಾಜ್ಯ ಹಾಗೂ ಅಂತಾರಾಜ್ಯ ಕ್ರಿಕೆಟ್ ಪಂದ್ಯಾವಳಿಯನ್ನು ಅ.31ರಿಂದ ನ.2 ರವರೆಗೆ ಆಯೋಜನೆ ಮಾಡಲಾಗಿದೆ. 3 ದಿನ ನಡೆಯುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೊದಲ ಸ್ಥಾನ ಪಡೆದ ತಂಡಕ್ಕೆ 2 ಲಕ್ಷ ರೂ. ನಗದು ಬಹುಮಾನ ಜತೆಗೆ ಟ್ರೋಫಿ ಹಾಗೂ ದ್ವಿತೀಯ ಸ್ಥಾನಕ್ಕೆ 1 ಲಕ್ಷ ರೂ. ನಗದು ಬಹುಮಾನ ಜತೆಗೆ ಟ್ರೋಫಿ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.