ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

Crime Logo
Published on

ಹನೂರು : ತಾಲೂಕಿನ ಮಾರ್ಟಳ್ಳಿ ಸಮೀಪದ ಕೀರೆಪಾತಿ ಜಲಾಶಯದ ಅರಣ್ಯ ಪ್ರದೇಶದ ಬಳಿ ಸೋಮವಾರ ವ್ಯಕ್ತಿಯೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತಾಲೂಕಿನ ಹಳೆಯೂರು ಗ್ರಾಮದ ಶಿವರುದ್ರ (34) ಮೃತ. ಈತ ಹಿಟಾಚಿ ಅಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಜೂ. 30 ರಂದು ಕೊಕ್ಕಬರೆ ಗ್ರಾಮದ ಯುವತಿಯನ್ನು ಈತ ವಿವಾಹವಾಗಿದ್ದ. ಆದರೆ ಬೆಳಗ್ಗೆ 8ರ ವೇಳೆಯಲ್ಲಿ ಈತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ರಾಮಾಪುರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಮೃತದೇಹವನ್ನು ರಾಮಾಪುರ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ನೀಡಲಾಗಿದೆ. ಈ ಸಂಬಂಧ ರಾಮಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net