ನಂದಿ ಮಹಾರಾಜರ ಹತ್ಯೆ ;ಇಬ್ಬರು ಪೊಲೀಸರ ವಶಕ್ಕೆ!

IMG-20230708-WA0005.jpg
Published on


ಬೆಳಗಾವಿ: ಹಿರೇಕೋಡಿಯ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ಇಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಎಸ್ ಪಿ ಡಾ. ಸಂಜೀವ ಪಾಟೀಲ ತಿಳಿಸಿದ್ದಾರೆ.
ಖಟಕಬಾವಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬುಧವಾರ ರಾತ್ರಿಯಿಂದ ಸ್ವಾಮೀಜಿ ಕಾಣೆಯಾಗಿದ್ದಾರೆ ಎಂದು ನಿನ್ನೆ ಭಕ್ತರು ದೂರು ನೀಡಿದರು.ಭಕ್ತರು ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದೇವು ತನಿಖೆ ವೇಳೆ ಆಶ್ರಮಕ್ಕೆ ಯಾರು ಬಂದು ಹೋಗಿದ್ದರೆಂದು ವಿಚಾರಣೆ ನಡೆಸಿದಾಗ ಸ್ವಾಮೀಜಿಗೆ ಪರಿಚಯವಿದ್ದ ವ್ಯಕ್ತಿ ಆಶ್ರಮದಲ್ಲಿ ಕೊಲೆ ಮಾಡಿ ಬೇರೆಡೆ ಶವ ಬಿಸಾಕಿದ ಬಗ್ಗೆ ಮಾಹಿತಿ ನೀಡಿದ್ದ ಈ ಕೃತ್ಯಕ್ಕೆ ಸಹಕಾರ ನೀಡಿದ್ದ ಓರ್ವನ ಸೇರಿ ಇಬ್ಬರನ್ನು ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net