ಮನೆಯಲ್ಲಿ ಚಿನ್ನಾಭರಣ ಕಳವು

crime
Published on

ಗುಂಡ್ಲುಪೇಟೆ: ಪಟ್ಟಣದ 13 ನೇ ವಾರ್ಡಿನಲ್ಲಿ ಸೋಮವಾರ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಚಿನ್ನಾಭರಣ ಹಾಗೂ ಹಣ ಕಳ್ಳತನ ಮಾಡಲಾಗಿದೆ. ವಾರ್ಡಿನ ವರದರಾಜು ಅವರು ಕುಟುಂಬ ಸಮೇತ ಕೆ.ಆರ್.ನಗರ ತಾಲೂಕಿನ ಹಂಪಾಪುರ ಗ್ರಾಮಕ್ಕೆ ಹೋಗಿದ್ದಾಗ ದುಷ್ಕರ್ಮಿಗಳು ಮನೆಯ ಬೀಗ ಮುರಿದು ಒಳಗೆ ಪ್ರವೇಶಿಸಿ, ಬೀರುವಿನಲ್ಲಿದ್ದ 97 ಸಾವಿರ ನಗದು ಹಾಗೂ 48 ಸಾವಿರ ಬೆಲೆಬಾಳುವ ಚಿನ್ನಾಭರಣ ಕದ್ದೊಯ್ದಿದ್ದಾರೆ. ಈ ಬಗ್ಗೆ ಪಟ್ಟಣದ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net