ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ: 104 ಗ್ರಾಂ ತೂಕದ ಆಭರಣ ವಶ

Crime Logo
Published on

ಕೆ.ಆರ್.ಪೇಟೆ: ಬಾಗಿಲು ಮುರಿದು ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೆ.ಆರ್.ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ತಿ.ನರಸೀಪುರ ತಾಲೂಕಿನ ಚಾಮನಹಳ್ಳಿ ಗ್ರಾಮದ ನಿವಾಸಿ ನಂಜುಂಡ ಎಂಬುವರ ಪುತ್ರ ಮಂಜುನಾಥ್(28) ಬಂಧಿತ ಆರೋಪಿ. ಈತನಿಂದ ಪೊಲೀಸರು 5.5 ಲಕ್ಷ ರೂ. ಮೌಲ್ಯದ 104 ಗ್ರಾಂ ತೂಕದ ಚಿನ್ನಾಭರಣ ಹಾಗೂ 5 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ.

ಈತ ಹಾಗೂ ಸಹಚರರು ಏ.5ರಂದು ಪಟ್ಟಣದ ಜಯನಗರ ಬಡಾವಣೆ ನಿವಾಸಿ ರಾಮೇಗೌಡ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಒಳ ನುಗ್ಗಿ ಬೀರುನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಈ ಸಂಬಂಧ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೆ.ಆರ್.ಪೇಟೆ ಠಾಣೆ ಇನ್ಸ್‌ಪೆಕ್ಟರ್ ಆನಂದ್ ಕುಮಾರ್ ಹಾಗೂ ಸಿಬ್ಬಂದಿ ತನಿಖೆ ಕೈಗೊಂಡು ಆರೋಪಿ ಮಂಜುನಾಥ್‌ನನ್ನು ಭಾನುವಾರ ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ,

ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. ಕಾರ್ಯಾಚರಣೆಯಲ್ಲಿ ಎಸ್‌ಐಗಳಾದ ಎಸ್.ಪಿ. ಸುನಿಲ್, ಬಸವರಾಜ್ ಚುಂಚೋಳಿ, ಎಎಸ್‌ಐ ಬಿ.ಎಸ್. ಚಂದ್ರಶೇಖರ್, ಸಿಬ್ಬಂದಿಗಳಾದ ಹಾಳೇಗೌಡ, ಜಯವರ್ಧನ್, ಮಂಜು, ಶಶಿಕುಮಾರ, ಸುನೀಲ್, ಪ್ರದೀಪ್, ಪ್ರಕಾಶ್ ಪಾಟೀಲ್, ಅವಿನಾಶ್, ಜಿಲ್ಲಾ ತಾಂತ್ರಿಕ ವಿಭಾಗದ ಲೋಕೇಶ್ ಮತ್ತು ರವಿಕಿರಣ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net