ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ವಶ

07raju12
Published on

ಚಾಮರಾಜನಗರ: ಸೆನ್ ಕ್ರೈಂ ಪೊಲೀಸರ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಗಾಂಜಾ ಗಿಡ ಹಾಗೂ ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ತಾಲೂಕಿನ ಮೂಕನಪಾಳ್ಯ ಗ್ರಾಮದ ನಿವಾಸಿಗಳಾದ ಶಿವಕುಮಾರ್ ಹಾಗೂ ಚಿಕ್ಕುನಾಯ್ಕ ತಮ್ಮ ಮನೆಯ ಪಕ್ಕದಲ್ಲಿರುವ ಜಾಗದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳು ಹಾಗೂ ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯದ ೌಚ್‌ಗಳನ್ನು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಸೆನ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪಿ.ಐ ಆನಂದ್ ಕುಮಾರ್, ಪಿಎಸ್‌ಐ ಸುನೀಲ್, ಮಹದೇವಸ್ವಾಮಿ, ಸಿಬ್ಬಂದಿಗಳಾದ ರಾಜು, ಜಗದೀಶ್, ಮಹೇಶ್, ರಮೇಶ್, ಸುಬ್ರಮಣಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net