

ಮಡಿಕೇರಿ: ಮೀನು ಹಿಡಿಯುವ ಸಂದರ್ಭ ವ್ಯಕ್ತಿಯೋರ್ವ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಿದ್ದಾಪುರ ಸಮೀಪದ ಹಚ್ಚಿನಾಡು ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.
ಪಂಜರಿ ಯರವರ ಪುಟ್ಟ(೪೫) ಕರೆಯಲ್ಲಿ ಮುಳುಗಿ ಮೃತಪಟ್ಟ ದುರ್ದೈವಿ.
ಗ್ರಾಮದ ತಾರ ಗಣಪತಿರವರ ತೋಟದ ಕಾರ್ಮಿಕನಾಗಿದ್ದ. ಮಂಗಳವಾರ ಕೆರೆಗೆ ಮೀನು ಹಿಡಿಯಲೆಂದು ಯಾರಿಗೂ ಹೇಳದೆ ತೆರಳಿದ್ದ ಪುಟ್ಟ ಸಂಜೆಯಾದರು ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ನಂತರ ಕೆರೆ ಬಳಿ ಚಪ್ಪಲಿ ದೊರೆತ್ತಿದ್ದು, ಈಜುಗಾರರು ಕೆರೆಯಲ್ಲಿ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.
ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.