ನಕಲಿ ಬೀಜ ಮಾರಾಟಗಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ

B.C. PATIL
Published on

ಹಾವೇರಿ: ಬೀಜೋತ್ಪಾದನೆಯಲ್ಲಿ ರಿಜೆಕ್ಟ್ ಆದ ನಕಲಿ ಬೀಜಗಳನ್ನು ಮಾರಾಟ ಮಾಡುವುದು ರೈತರ ಬದುಕನ್ನು ಸಾಯಿಸುವಂತಹ ಮಹಾಪರಾಧವಾಗಿದೆ. ಇಂತಹ ನಕಲಿ ಬಿಡಿ ಬೀಜ ಮಾರಾಟಗಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಎಚ್ಚರಿಸಿದ್ದಾರೆ.

ಜಿಲ್ಲೆಯ ಕೃಷಿ ಅಧಿಕಾರಿಗಳು ಜಿಲ್ಲೆಯಲ್ಲಿ ಈಗಾಗಲೇ 6 ಕೋಟಿ ರೂ. ಮೌಲ್ಯದ ಅಕ್ರಮ ಬಿಡಿ ಬೀಜಗಳ ದಾಸ್ತಾನು ವಶಪಡಿಸಿಕೊಂಡಿದ್ದು, ಕೃಷಿ ಅಧಿಕಾರಿಗಳು ಶ್ಲಾಘನೀಯ ಕಾರ್ಯ ಮಾಡಿದ್ದಾರೆ. ಇಂತಹ ಕಳಪೆ ನಕಲಿ ಬೀಜ ಮಾರಾಟ ಮಾಡುವವರು ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇಂತಹ ಕೃತ್ಯವನ್ನು ಸಹಿಸುವುದಿಲ್ಲ. ಕೃಷಿ ಅಧಿಕಾರಿಗಳು ಮತ್ತು ವಿಚಕ್ಷಣಾ ತಂಡ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ನಕಲಿ, ಕಳಪೆ, ಅಕ್ರಮ ಬೀಜವಾಗಲಿ, ಗೊಬ್ಬರವಾಗಲಿ ಮಾರಾಟ ಮಾಡುವವರು ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ. ಹಾವೇರಿಯಲ್ಲಿ ಪತ್ತೆಯಾದ ನಕಲಿ ಬಿಡಿ ಬೀಜಗಳ ದಾಸ್ತಾನು ವಶ ಪ್ರಕರಣವನ್ನು ನ್ಯಾಯಾಲಯದ ವಶಕ್ಕೆ ವಹಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net