ಟ್ರೋಲ್ ಕಿಂಗ್ 193 ಇನ್ ಸ್ಟ್ರಾ ಗ್ರಾಂ ಅಡ್ಮಿನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

Published on

ಮಂಗಳೂರು: ಟ್ರೋಲ್ ಕಿಂಗ್ 193 ಇನ್ ಸ್ಟ್ರಾಗ್ರಾಂ ಅಡ್ಮಿನ್ ವಿರುದ್ಧ ಮಂಗಳೂರು ಪೊಲೀಸರು ಕ್ರಮಿನಲ್ ಪ್ರಕರಣ ದಾಖಲಿಸಿದ್ದಾರೆ.

ಹಿಂದು ದೇವಾಲಯದ ಗೋಪುರದ ಮೇಲೆ ಹಸಿರು ಬಾವುಟ ಹಾರಿಸಿರುವ ವಿಡಿಯೋ ಎಡಿಟ್ ಮಾಡಿ ಹಾಕಿರುವುದು ಪತ್ತೆಯಾಗಿದೆ. ಕೋಮು ಸೂಕ್ಷ್ಮ ಜಿಲ್ಲೆಯಲ್ಲಿ ಇಂತಹ ಚಿತ್ರಗಳನ್ನು ಬಿತ್ತರಿಸುವ ಮೂಲಕ ಕೋಮು ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಕಾನೂನಿನೊಡನೆ ಸಂಘರ್ಷಕ್ಕಿಳಿದ ಬಾಲಕನನ್ನು ವಿಚಾರಣೆಗೊಳಪಡಿಸಲಾಗಿದೆ ಎಂದವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net