ಟೀಕೆ ಮಾಡುವುದೇ ವಿರೋಧ ಪಕ್ಷದವರ ಕೆಲಸ

Published on

ಮದ್ದೂರು: ರಾಜ್ಯ ಸರ್ಕಾರದ ಮೇಲೆ ಅನಗತ್ಯವಾಗಿ ಟೀಕೆ ಮಾಡುವುದನ್ನೇ ವಿರೋಧ ಪಕ್ಷದವರು ಕೆಲಸ ಮಾಡಿಕೊಂಡಿದ್ದಾರೆ ಎಂದು ಶಾಸಕ ಉದಯ್ ತಿಳಿಸಿದರು.

ತೈಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಜತೆಗೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿರುವುದನ್ನು ವಿರೋಧ ಪಕ್ಷದವರು ಸಹಿಸದೆ ಟೀಕೆ ಮಾಡುತ್ತಿದ್ದಾರೆ. ಇದಕ್ಕೆ ಹೆಚ್ಚಿನ ಮಹತ್ವ ನೀಡುವ ಅವಶ್ಯಕತೆ ಇಲ್ಲ ಎಂದರು.

ಈ ಬಾರಿಯ ಬಜೆಟ್‌ನಲ್ಲಿ ಉತ್ತಮ ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡಿದ್ದರೂ, ಜಿಲ್ಲೆಯ ಮೈಶುಗರ್ಸ್ ನೂತನ ಸಕ್ಕರೆ ಕಾರ್ಖಾನೆ ನಿರ್ಮಾಣ ಸೇರಿದಂತೆ ಹಲವು ನೀರಾವರಿ ಯೋಜನೆಗಳಿಗೆ ಒತ್ತು ನೀಡಿದ್ದರೂ ವಿರೋಧ ಪಕ್ಷದವರಿಗೆ ಇವುಗಳು ಏನೂ ಕಾಣಿಸುತ್ತಿಲ್ಲ ಎಂದರು.

ಬಜೆಟ್‌ನಲ್ಲಿ ಘೋಷಣೆಯಾಗಿರುವ ಹಾಗೆ ಮದ್ದೂರು ತಾಲೂಕು ವ್ಯಾಪ್ತಿಯ ಕೆಮ್ಮಣು ್ಣನಾಲೆ ಅಭಿವೃದ್ಧಿ ಸೇರಿದಂತೆ ಇತರ ಅನೇಕ ಕೆಲಸಗಳ ಕಾಮಗಾರಿಗಳು ಇಷ್ಟರಲ್ಲೇ ಆರಂಭವಾಗಲಿವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net