

ಬೆಳಗಾವಿ: ನೆರೆಯ ಮಹಾರಾಷ್ಟ್ರದ ಪಂಢರಪುರಕ್ಕೆ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಕಾರು ಹರಿದಿದ್ದು, ಆರು ಜನ ಭಕ್ತರು ಗಂಭೀರ ಸ್ಥಿತಿಯಲ್ಲಿದ್ದು, ಹಾರೂಗೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಯಬಾಗ ತಾಲೂಕಿನ ಹಿಡಕಲ್ ಮೂಲದ ಭಕ್ತರು ಅಥಣಿ ಮಾರ್ಗವಾಗಿ ಪಾದಯಾತ್ರೆ ತೆರಳುತ್ತಿದ್ದರು. ಈ ವೇಳೆ ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿಧ ಎಂದು ಪೊಲೀಸರು ತಿಳಿಸಿದ್ದಾರೆ.