ಫೋಟೋಗ್ರಾಫರ್ ಕೊಲೆಗೆ ಯತ್ನ; ಮಹಿಳೆ ಸೇರಿ‌ 8ಜನರ ಬಂಧನ

20241126_121056.jpg
Published on

ಬೆಳಗಾವಿ: ಫೋಟೋಗ್ರಾಫರ್ ಕೊಲೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳಮಾರುತಿ ಠಾಣೆ ಪೊಲೀಸರು ಮಹಿಳೆ ಸೇರಿ ಎಂಟು ಜನರನ್ನು ಬಂಧಿಸಿದ್ದಾರೆ.

ಬೈಲಹೊಂಗಲ ‌ತಾಲೂಕಿನ ಬೆಳವಡಿ ಗ್ರಾಮದ ಬಸವರಾಜ್ ನರಟ್ಟಿ, ಪ್ರವೀಣ ಉಮರಾಣಿ, ವಿಕ್ಕಿ, ತಾರಾ ನರಟ್ಟಿ, ಲಕ್ಷ್ಮಿ ನರಟ್ಟಿ ಸೇರಿ ಎಂಟು ಜನರ ಬಂಧನ.

ಮಹಿಳೆಯ ಫೋಟೊ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದ ಎನ್ನುವ ಆರೋಪದ‌ ಮೇಲೆ ಖಾಸಗಿ ಫೋಟೋಗ್ರಾಫರ್ ನ್ನು ಅಪಹರಿಸಿ ಕೊಲೆಗೆ ಯತ್ನಿಸಿ ಜೀವ ಬೇದರಿಕೆ ಹಾಕಿದ್ದರು ಎನ್ನಲಾಗಿದೆ. ಬೈಲಹೊಂಗಲ ‌ತಾಲೂಕಿನ ಮುರಕಿಬಾವಿ ಗ್ರಾಮದ ಉಮೇಶ ಹೊಸೂರು ಅಪಹರಣಕ್ಕೆ‌ಒಳಗಾದ ವ್ಯಕ್ತಿ.

ಬಸವರಾಜ್ ನರಟ್ಟಿಸೇರಿದ ಸ್ಟುಡಿಯೋದಲ್ಲಿ ಕೆಲಸ ಮಾಡುತ್ತಿದ್ದ ಉಮೇಶ12 ವರ್ಷಗಳ ಕಾಲ ಬಸವರಾಜ್ ನರಟ್ಟಿ ಸ್ಟುಡಿಯೋದಲ್ಲಿ ಕೆಲಸ ಮಾಡಿದ್ದ. ಸರಿಯಾಗಿ ಸಂಬಳ ಕೊಡ್ತಿಲ್ಲವೆಂದು ಕಳೆದ ವರ್ಷ ಕೆಲಸ ಬಿಟ್ಟು ಸ್ವಂತ‌ ಸ್ಟುಡಿಯೋ ತೆರೆದಿದ್ದ ಉಮೇಶ ಮದುವೆ, ಗೃಹ ಪ್ರವೇಶ‌ಗಳ ಆರ್ಡರ್ ಹಿಡಿದು ವಿಡಿಯೋಗ್ರಾಫಿ ಮಾಡುತ್ತಿದ್ದ. ಎರಡು ದಿನಗಳ ‌ಹಿಂದೆ ಬೆಳಗಾವಿಯ ಕೆಪಿಟಿಸಿಎಲ್ ಹಾಲ್‌ನಲ್ಲಿ ನಡೆಯುತ್ತಿದ್ದ ಮದುವೆ ಆರ್ಡರ್ ಹಿಡಿದಿದ್ದ ಉಮೇಶ ಕೆಪಿಟಿಸಿಎಲ್ ಹಾಲ್‌‌ಗೆ ಬಂದ ವಿಕ್ಕಿ ಎಂಬಾತ ಉಮೇಶನನ್ನು ತನ್ನ ಕಾರಿನ ಕಡೆಗೆ ಕರೆದೊಯ್ದು ಅಪಹರಣ ಮಾಡಿದ್ದಾರೆ. ವಿಕ್ಕಿ ಹಾಗೂ ಆತನ ಇಬ್ಬರ ಸ್ನೇಹಿತರಿಂದ ಕಾರಿನಲ್ಲೇ ಉಮೇಶ ಮೇಲೆ ಹಲ್ಲೆ ಮಾಡಿ ಚಿವಟಗುಂಡಿ ಕ್ರಾಸ್ ಬಳಿ ವಾಹನ ನಿಲ್ಲಿಸಿ ಕಬ್ಬಿನ ರಾಡ್‌ನಿಂದ ವಿಕ್ಕಿಯಿಂದ ಉಮೇಶ ಮೇಲೆ ಹಲ್ಲೆ ಮಾಡಿ ಬಳಿಕ ಬೈಲಹೊಂಗಲದ ಬಸವರಾಜ್ ನರಟ್ಟಿ ಸಂಬಂಧಿಕರ ಮನೆಗೆ ಉಮೇಶ‌ನನ್ನು ಕರೆದೊಯ್ದ ಆರೋಪಿಗಳು ನಮ್ಮ ಮನೆಯ ಹೆಣ್ಣಮಗಳ ಫೋಟೊವನ್ನು ನಿನ್ನ ಬಳಿ ಏಕೆ ಇಟ್ಟುಕೊಂಡಿರುವೆ ಎಂದು ಹಲ್ಲೆ ಮಾಡಿದ್ದಾರೆ‌ ಎಂಬ ಮಾಹಿತಿ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net