ಅಪರಿಚಿತ ವಾಹನಕ್ಕೆ ಸಿಲುಕಿ ಮೊಸಳೆ ಸಾವು

37
Published on

ಮೈಸೂರು: ತಾಲೂಕಿನ ಕಾಮನಕೆರೆ ಹುಂಡಿ ಗ್ರಾಮದ ಕೆರೆ ಪಕ್ಕದ ರಸ್ತೆಯಲ್ಲಿ ಮೊಸಳೆಯೊಂದು ದಾಟುತ್ತಿದ್ದಾಗ ಅಪರಿಚಿತ ವಾಹನಕ್ಕೆ ಸಿಲುಕಿ ಮೃತಪಟ್ಟಿದೆ.

ಸುಮಾರು 35-40 ವರ್ಷದ ಹೆಣ್ಣು ಮೊಸಳೆಯಾಗಿದೆ. ಮೃತ ದೇಹವನ್ನು ಪಶುವೈದ್ಯಾಧಿಕಾರಿಗಳಿಂದ ಮರಣೋತ್ತರ ಶವ ಪರೀಕ್ಷೆ ನಡೆಸಿ ವಿಲೇವಾರಿ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎಸ್.ಬಸವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net