ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ

jlr
Published on

ಜಗಳೂರು: ಮುಂಗಾರಿನಲ್ಲಿ ಕಾಡುಪ್ರಾಣಿಗಳಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ನೇತೃತ್ವದಲ್ಲಿ ರೈತರು ಬುಧವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಮಹಾತ್ಮ ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ತಾಲೂಕು ಕಚೇರಿಗೆ ತಲುಪಿ ತಹಸೀಲ್ದಾರ್ ಸಂತೋಷಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಂರೈತ ಸಂಘದ ಕಾರ್ಯಕರ್ತರ ಪ್ರತಿಭಟನೆಜೀವಿ ಸಿ.ಎಂ.ಹೊಳೆ ಮಾತನಾಡಿ, ತಾಲೂಕಿನ ರಂಗಯ್ಯನದುರ್ಗ ಅಭಯಾರಣ್ಯದ ಮಧ್ಯೆ ಹಾಗೂ ಅಂಚಿನಲ್ಲಿರುವ ಗ್ರಾಮಗಳ ಜಮೀನುಗಳಲ್ಲಿ ವನ್ಯಜೀವಿಗಳ ಹಾವಳಿಯಿಂದ ಮೆಕ್ಕೆಜೋಳ, ಶೇಂಗಾ, ಹತ್ತಿ ಮತ್ತಿತರ ಬೆಳೆಗಳು ನಾಶವಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರದ ಭರವಸೆ ನೀಡಿದ್ದಾರೆ. ಇದುವರೆಗೂ ಸಿಕ್ಕಿಲ್ಲ ಎಂದು ಕಿಡಿಕಾರಿದರು.

ಸರ್ಕಾರದ ಆದೇಶದಂತೆ ಮೆಕ್ಕೆಜೋಳಕ್ಕೆ ಕ್ವಿಂಟಾಲ್‌ಗೆ 1240 ರೂ. ಪರಿಹಾರ ಒದಗಿಸಬೇಕು. ಆದರೆ, ಕೇವಲ ಕ್ವಿಂಟಾಲ್‌ಗೆ 500ರಿಂದ 600 ರೂ.ವರೆಗೆ ಪರಿಹಾರ ಒದಗಿಸಲಾಗಿದೆ. ಪ್ರತಿ ರೈತರಿಗೆ 15ರಿಂದ 20 ಕ್ವಿಂಟಾಲ್ ಮೆಕ್ಕೆಜೋಳ ನಷ್ಟವಾಗಿದೆ. ಆದರೆ, ಕೇವಲ ಒಂದು ಕ್ವಿಂಟಾಲ್‌ಗೆ ಪರಿಹಾರ ನೀಡುತ್ತಿರುವುದು ತೀವ್ರ ಅನ್ಯಾಯವಾಗಿದೆ ಎಂದು ದೂರಿದರು.

ಜಿಲ್ಲಾ ಕಾರ್ಯದರ್ಶಿ ಗೌಡಗೊಂಡನಹಳ್ಳಿ ಸತೀಶ್, ತಾಲೂಕು ಅಧ್ಯಕ್ಷ ಗಂಗಾಧರಪ್ಪ, ಪ್ರಧಾನ ಕಾರ್ಯದರ್ಶಿ ರಾಜನಹಟ್ಟಿ ರಾಜು, ಪದಾಧಿಕಾರಿಗಳಾದ ಶರಣಪ್ಪ, ಕೆಂಚಪ್ಪ, ತಿಪ್ಪೇಸ್ವಾಮಿ, ಪರಸಪ್ಪ, ಏಕಾಂತಪ್ಪ, ದೇವೇಂದ್ರಪ್ಪ, ಅಂಜಿನಪ್ಪ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net