

ಚಿಕ್ಕಮಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ೬೧,೭೦೦ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
ತಾಲೂಕಿನ ದತ್ತಪೀಠ ಸಮೀಪದ ಕವಿಕಲ್‌ಗಂಡಿಯಲ್ಲಿ ಭಾರಿ ಮಳೆಯಿಂದ ರಸ್ತೆ ಕುಸಿತವಾಗಿರುವುದನ್ನು ವೀಕ್ಷಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆವಿಗೂ ಉತ್ತರ ಕರ್ನಾಟಕ ಹಾಗೂ ರಾಜ್ಯದ ಅಲ್ಲಲ್ಲಿ ಬೆಳೆ ಹಾನಿಯಾಗಿರುವ ವರದಿ ಬಂದಿದೆ. ಮಲೆನಾಡು ಪ್ರದೇಶದಲ್ಲಿ ಬೆಳೆ ಹಾನಿ ಜೊತೆಗೆ ಗುಡ್ಡ ಕುಸಿತ ಉಂಟಾಗಿದೆ. ಹಾನಿಗೆ ಸಂಬAಧಿಸಿದAತೆ ತಕ್ಷಣ ಪರಿಹಾರ ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನೂ ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದ್ದು, ಹಾನಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ೨೦೧೯ ನೇ ಹಾಗೂ ೨೦೨೨ ನೇ ಸಾಲಿನಲ್ಲಿ ೧೨ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿತ್ತು. ಆ ಸಂದರ್ಭದಲ್ಲಿ ೨೫೦ ಜನರ ಪ್ರಾಣ ಹಾನಿಯಾಗಿದ್ದು, ಈ ವರ್ಷ ೫೮ ಜನ ಇಲ್ಲಿಯವರೆಗೂ ಪ್ರವಾಹದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಹಿಂದಿನ ವರ್ಷಕ್ಕೆ ಹೋಲಿಕೆ ಮಾಡಿದರೆ. ದೊಡ್ಡ ಪ್ರವಾಹ ಕಂಡು ಬಂದಿಲ್ಲ. ಕೆಲವು ಸೀಮಿತ ಪ್ರದೇಶಗಳಲ್ಲಿ ಹಾನಿಯಾಗಿದೆ ಎಂದರು.
ಅಧಿವೇಶನ ಮುಗಿದ ತಕ್ಷಣ ಮುಖ್ಯಮಂತ್ರಿಗಳು, ನಾನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹದಿಂದ ಉಂಟಾಗಿರುವ ಹಾನಿಯನ್ನು ವೀಕ್ಷಿಸಿ ಜನರಿಗೆ ಆಗಿರುವ ಸಮಸ್ಯೆಗೆ ನೆರವು ನೀಡುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಮಲೆನಾಡು ಬಹುಕಾಲದಿಂದ ಹೆಚ್ಚು ಮಳೆ ಕಂಡಿರುವ ಪ್ರದೇಶವಾಗಿದೆ. ಇಲ್ಲಿ ಸ್ವಾಭಾವಿಕವಾಗಿ ಮಳೆ ತಡೆದುಕೊಳ್ಳುವ ಸಾಮರ್ಥ್ಯ ಇಲ್ಲಿನ ಭೂಮಿಗೆ ಇದೆ. ಹವಾಮಾನ ಬದಲಾವಣೆಯಿಂದಾಗಿ ಜೂನ್ ತಿಂಗಳಿನಿAದ ಜುಲೈ ೧೦ರ ವರೆಗೆ ಮಳೆ ಕೊರತೆ ಕಾಣುತ್ತೇವೆ. ಜುಲೈ ೧೦ ರ ನಂತರ ಎರಡು ತಿಂಗಳಿಗಾಗುವಷ್ಟು ಮಳೆ ೨೦ ದಿನದಲ್ಲಿ ಸುರಿದಿದೆ. ಹವಾಮಾನ ಬದಲಾವಣೆಯಾಗುತ್ತಿರುವ ಹಿನ್ನಲೆಯಲ್ಲಿ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿವೆ. ಪರಿಸರದ ವಿಷಯದಲ್ಲಿ ಪ್ರತಿಯೊಬ್ಬರು ಜಾಗೃತರಾಗಬೇಕು. ಇಷ್ಟ ಬಂದ ಹಾಗೇ ಗುಡ್ಡ ಕಡಿದು ರಸ್ತೆ ನಿರ್ಮಾಣ ಮಾಡುವುದರಿಂದ ಗುಡ್ಡ ಕುಸಿತದಂಥ ಅವಘಡಗಳನ್ನು ಕಾಣುತ್ತಿz್ದೆÃವೆ ಎಂದು ತಿಳಿಸಿದರು.
ಗುಡ್ಡ ಕುಸಿತದಂತಹ ಸಮಸ್ಯೆಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರದ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದಿAದ ರಾಜ್ಯದಲ್ಲಿ ಎಲ್ಲೆಲ್ಲಿ ಗುಡ್ಡ ಕುಸಿತ ಸಾಧ್ಯತೆ ಹೆಚ್ಚಿದೆಯೋ ಅಂತಹ ಕಡೆ ಈಗಾಗಲೇ ವೈಜ್ಞಾನಿಕ ಸರ್ವೆ ಮಾಡಿಸಿದ್ದು, ಅದರ ವರದಿ ಆಧಾರದ ಮೇಲೆ ಮಲೆನಾಡು ಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮಾಹಿತಿ ಕಳುಹಿಸಲಾಗಿದೆ. ಆ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಯಾವ ಜನವಸತಿ ಪ್ರದೇಶಗಳಲ್ಲಿ ಗುಡ್ಡ ಕುಸಿತದಿಂದ ತೊಂದರೆಯಾಗುವುದನ್ನು ಗುರುತಿಸಿ ವರದಿ ಕೊಡಲು ತಿಳಿಸಿz್ದÉÃವೆ ಎಂದರು.
ಇನ್ನೂ ೧೦-೧೫ ದಿನಗಳಲ್ಲಿ ವರದಿ ತರಿಸಿಕೊಂಡು ಈ ವರ್ಷ ೧೦೦ ಕೋಟಿ, ಮುಂದಿನ ವರ್ಷ ೨೦೦ ಕೋಟಿ ಸೇರಿದಂತೆ ಒಟ್ಟು ೩೦೦ ಕೋಟಿ ರೂ. ವೆಚ್ಚದಲ್ಲಿ ಗುಡ್ಡ ಕುಸಿತ ತಡೆಗಟ್ಟುವ ಕಾಮಗಾರಿ ಕೈಗೊಳ್ಳಲು ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ. ಈ ಅನುದಾನದಲ್ಲಿ ಮಲೆನಾಡು ಜಿಲ್ಲೆಗಳಲ್ಲಿ ಹಾಗೂ ಅಕ್ಕಪಕ್ಕದ ಕರಾವಳಿ ಜಿಲ್ಲೆಗಳ ಗುಡ್ಡ ಕುಸಿತ ತಡೆಗಟ್ಟುವ ಕಾಮಗಾರಿ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಅತಿವೃಷ್ಟಿಯಿಂದ ಹಾನಿಯಾಗಿರುವ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಶೀಘ್ರವಾಗಿ ಕೈಗೊಳ್ಳಲು ತಿಳಿಸಲಾಗಿದೆ. ಗುಡ್ಡ ಕುಸಿತದಿಂದ ಹಾನಿಯಾಗಿರುವ ರಸ್ತೆಗಳ ದುರಸ್ತಿ ಸಾಧ್ಯವಿಲ್ಲ. ಅವುಗಳ ಮರು ನಿರ್ಮಾಣವಾಗಬೇಕಾಗಿದೆ. ಮರು ನಿರ್ಮಾಣವಾಗ ಬೇಕಾಗಿರುವ ರಸ್ತೆಗಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎಚ್. ಹರೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಎಸ್‌ಪಿ ವಿಕ್ರಮ ಅಮಟೆ, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್ ಮತ್ತಿತರರಿದ್ದರು.