ಬೆಳೆಹಾನಿ ಸಮೀಕ್ಷೆ ಪ್ರಗತಿ ಪರಿಶೀಲನಾ ಸಭೆ

MDK08
Published on

ಮಡಿಕೇರಿ: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿ ಬೆಳೆ ಹಾನಿಯಾಗಿರುವ ಕುರಿತು ಸಮೀಕ್ಷೆ ಮಾಡಿ ವರದಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.


ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಬೆಳೆಹಾನಿ ಸಮೀಕ್ಷೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜುಲೈ ಮೂರನೇ ವಾರ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಹಲವು ಕಡೆಗಳಲ್ಲಿ ಕಾಫಿ ಸೇರಿದಂತೆ ತೋಟಗಾರಿಕೆ ಬೆಳೆಗಳು ಹಾನಿಯಾಗಿದೆ. ಈ ಸಂಬಂಧ ನಿಖರ ವರದಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.


ಬೆಳೆ ಹಾನಿ ಸಮೀಕ್ಷೆ ಸಂಬಂಧಿಸಿದಂತೆ ಸ್ಥಳೀಯರಿಗೆ ಮಾಹಿತಿ ಇರಬೇಕು. ಆ ನಿಟ್ಟಿನಲ್ಲಿ ಬೆಳೆ ಹಾನಿ ಸಮೀಕ್ಷೆಯನ್ನು ಕೈಗೊಂಡು ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು.


ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್ ಮತ್ತು ಕಾಫಿ ಮಂಡಳಿ ಉಪ ನಿರ್ದೇಶಕ ಚಂದ್ರಶೇಖರ್‌ರವರು ಮಾತನಾಡಿ, ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.


ಸಭೆಯಲ್ಲಿ ಕೃಷಿ ಜಂಟಿ ನಿರ್ದೇಶಕಿ ಶಬಾನಾ ಎಂ.ಶೇಕ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಪ್ರಮೋದ್, ಎಸ್.ಎನ್.ನರಗುಂದ, ಪ್ರಕಾಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net