ಬೆಳೆ ವಿಮೆ ಅರ್ಜಿ ಅವಧಿ 15ರ ವರೆಗೆ ವಿಸ್ತರಣೆ...

MP Kota
Published on

ಸಂಸದ ಕೋಟ ಪೂಜಾರಿ ಮನವಿಗೆ ಕೇಂದ್ರ ಸಮ್ಮತಿ

ವಿಜಯವಾಣಿ ಸುದ್ದಿಜಾಲ ಉಡುಪಿ

ಜಿಲ್ಲೆಯಲ್ಲಿ 2025-26ನೇ ಸಾಲಿನ ಹವಾಮಾನ ಆಧಾರಿತ ಅಡಕೆ ಮತ್ತು ಕಾಳುಮೆಣಸು ಬೆಳೆಗಳನ್ನು ವಿಮೆಗೆ ಅರ್ಜಿ ಸಲ್ಲಿಸಲು ಇದ್ದ ಜೂ.30ರ ಅಂತಿಮ ದಿನವನ್ನು ಜುಲೈ 15ರ ವರೆಗೆ ವಿಸ್ತಿರಿಸಿ ಕೇಂದ್ರ ಸರ್ಕಾರ ಆದೇಶ ಮಾಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಕೃಷಿಕರು ಬೆಳೆ ವಿಮೆಗೆ ಸಮಯ ವಿಸ್ತರಣೆ ಮಾಡುವಂತೆ ನನಗೆ ಮನವಿ ನೀಡಿದ್ದರು. ಆ ಹಿನ್ನೆಲೆಯಲ್ಲಿ ಹಾಗೂ ರೈತರ ಹಿತದೃಷ್ಟಿಯಿಂದ ಅವರಿಗೆ ಹೆಚ್ಚಿನ ಕಾಲಾವಕಾಶ ದೊರೆಯಬೇಕೆಂಬ ನಿಟ್ಟಿನಲ್ಲಿ ದಿನ ವಿಸ್ತರಿಸುವಂತೆ ರಾಜ್ಯ ಸರ್ಕಾರದ ತೋಟಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದೆ. ಅಲ್ಲದೆ, ಆ ಕುರಿತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವಂತೆ ಸಲಹೆ ಮಾಡಿದ್ದೆ ಎಂದು ತಿಳಿಸಿದ್ದಾರೆ.

ಅದೇ ವಿಚಾರವಾಗಿ ಕೇಂದ್ರದ ಅಧಿಕಾರಿಗಳೊಂದಿಗೂ ಮೊಬೈಲ್​ ಕರೆ ಮೂಲಕ ಮಾತುಕತೆ ನಡೆಸಿದ್ದೆ. ಇದೀಗ ವಿಮೆ ಅನುಷ್ಠಾನ ಸಂಸ್ಥೆಗಳು ಬೆಳೆ ವಿಮೆ ಕೊನೆಯ ದಿನಾಂಕ ವಿಸ್ತರಣೆಗೆ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಕೇಂದ್ರ ಸರ್ಕಾರವು ಯೋಜನೆ ನಿಯಮಾವಳಿಯಡಿ ದಿನಾಂಕ ವಿಸ್ತರಣೆಗೆ ಅಧಿಕೃತ ಅನುಮೋದನೆ ನೀಡಿದ್ದು, ಜುಲೈ15ರ ವರೆಗೆ ಅವಕಾಶ ನೀಡಿದೆ. ಬೆಳೆಗಾರರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಂಸದ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net