

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗೆ ನೋಂದಣಿ ಮಾಡಿಕೊಳ್ಳಲು ಜು. 31 ಕೊನೆಯ ದಿನವಾಗಿದೆ. ಕೆಂಪು ಮೆಣಸಿನಕಾಯಿ ಬೆಳೆ ವಿಮೆ ನೋಂದಣಿಗೆ ಆ. 16ರವರೆಗೆ ಅವಕಾಶವಿದೆ.
ಪ್ರತಿ ಎಕರೆಗೆ ಮಳೆ ಆಶ್ರಿತ ಬೆಳೆಗಳಾದ ಭತ್ತಕ್ಕೆ 515.99 ರೂಪಾಯಿ, ಮುಸುಕಿನ ಜೋಳ 457.31 ರೂ., ಜೋಳ 309.60 ರೂ., ಸೋಯಾಅವರೆ 331.85 ರೂ., ಉದ್ದು 2,65.08 ರೂ. ಹಾಗೂ ಹೆಸರು ಬೆಳೆಗೆ 269.13 ರೂ. ಪ್ರೀಮಿಯಂ ನಿಗದಿಪಡಿಸಲಾಗಿದೆ.
ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ, ಮೇಘ ಸೋಟ, ಗುಡುಗು, ಮಿಂಚುಗಳಿAದ ಉಂಟಾಗುವ ಬೆಂಕಿ ಅವಘಡದಿಂದ ಬೆಳೆ ನಷ್ಟವಾದರೆ ವಿಮೆ ನೆರವಿಗೆ ಬರಲಿದೆ.
ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕಿ ಜಯಶ್ರೀ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.