ಬೆಳೆ ಹಾನಿ ಪರಿಹಾರ ಪಾವತಿಗೆ ಸಹಾಯವಾಣಿ

farmers25
Published on



ಮಂಗಳೂರು : ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎಸ್‌ಡಿಆರ್‌ಐ, ಎನ್‌ಡಿಆರ್‌ಐ ಮಾರ್ಗ ಸೂಚಿಗಳ ಪ್ರಕಾರ ನಿಯಮಾನುಸಾರ ಬೆಳೆ ಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ 2000 ರೂ. ವರೆಗೆ ಪಾವತಿಸಲು ಸರ್ಕಾರ ಆದೇಶಿಸಿದೆ.
ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿ ಆಧಾರದ ಮೇಲೆ ಫ್ರೂಟ್ಸ್ ಐಡಿ ಹೊಂದಿರುವ, ಪಹಣಿ ಜೋಡಣೆಯಾಗಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ ಹಂತವಾಗಿ ಪರಿಹಾರ ಪಾವತಿಸುವ ಪ್ರಕ್ರಿಯೆ ಆರಂಭವಾಗಿದೆ. ಬೆಳೆ ಹಾನಿ ಪರಿಹಾರ ಪಾವತಿ ಸಂಬಂಧ ಮಾಹಿತಿಯನ್ನು ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದೆ.
ಸಹಾಯವಾಣಿ ವಿವರ : ಜಿಲ್ಲಾಧಿಕಾರಿಗಳ ಕಚೇರಿ : 0824-2442590, 1077, ಮಂಗಳೂರು ಉಪವಿಭಾಗ ಅಧಿಕಾರಿಗಳ
ಕಚೇರಿ : 0824-222058, ಮಂಗಳೂರು ತಾಲೂಕು ಕಚೇರಿ :0824-2220587,ಮೂಡುಬಿದಿರೆ ತಾಲೂಕು ಕಚೇರಿ :
08258-238100 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.................................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net