ರೈತರಿಂದಲೇ ಬೆಳೆ ಸಮೀಕ್ಷೆ

BELE SAMIKSHE
Published on

ಲಕ್ಷ್ಮೇಶ್ವರ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಯ ವಿವರಗಳನ್ನು ಆಪ್ ಮೂಲಕ ದಾಖಲಿಸಬಹುದಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ರೇವಣಪ್ಪ ಮನಗೂಳಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ರೈತರು ಗೂಗಲ್ ಪ್ಲೇ ಸ್ಟೋರ್​ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2024 ಅನ್ನು ಡೌನ್​ಲೋಡ್ ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬಹುದಾಗಿದೆ. ರೈತರು ವಿವರಗಳನ್ನು ಸರಿಯಾಗಿ ದಾಖಲಿಸುವುದರಿಂದ ಕನಿಷ್ಠ ಬೆಂಬಲಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಅತಿವೃಷ್ಟಿ, ಅನಾವೃಷ್ಟಿ ಬೆಳೆ ಹಾನಿ ಪರಿಹಾರ ಪಡೆಯಲು ಪಹಣಿಯಲ್ಲಿ ದಾಖಲಿಸಲು ಇದು ಹೆಚ್ಚು ಅನೂಕೂಲವಾಗಿದೆ. ಆದ್ದರಿಂದ ರೈತರು ತ್ವರಿತವಾಗಿ ಬೆಳೆ ಸಮೀಕ್ಷೆ ಆಪ್ ಮೂಲಕ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಮಾಹಿತಿಗಾಗಿ ಕಂದಾಯ, ತೋಟಗಾರಿಕೆ, ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net