೨,೬೦,೬೧೦ ತಾಕುಗಳಲ್ಲಿ ಬೆಳೆ ಸಮೀಕ್ಷೆ; ಶಬನಾ ಎಂ.ಷೇಕ್

shabahana m.shekh
Published on

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಒಟ್ಟು ೫೨೫ ಹಳ್ಳಿಗಳಲ್ಲಿ ೨,೯೦,೯೭೨ ಸರ್ವೆ ನಂಬರ್‌ಗಳಿದ್ದು, ಈ ಸರ್ವೆ ನಂಬರ್‌ಗಳ ಪೈಕಿ ೨,೬೦,೬೧೦ ತಾಕುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಬೇಕಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಬನಾ ಎಂ.ಷೇಕ್ ತಿಳಿಸಿದ್ದಾರೆ.


ಸರ್ಕಾರದ ಆದೇಶದಂತೆ ಈ ಬಾರಿಯ ರೈತರ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು “Farmer Crop Survey App-2022-23” ಎಂಬ ಹೆಸರಿನ ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊಬೈಲ್ ಆಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೪೯೦ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

ರೈತರು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಬಳಸಲು ಹೊಸ ರೈತರ ಬೆಳೆ ಸಮೀಕ್ಷೆ ಅಪ್ಲಿಕೇಷನ್ ಫ್ರೂಟ್ಸ್ ತಂತ್ರಾಂಶದ ಎಫ್‌ಐಡಿ ಸಂಖ್ಯೆಗೆ ಜೋಡಣೆಯಾಗಿರುವುದರಿಂದ ಅಫ್ಲಿಕೇಷನ್ ಬಳಸಲು ರೈತರು ಫ್ರೂಟ್ಸ್ ತಂತ್ರಾಂಶದ ಎಫ್‌ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ಕೇಂದ್ರ ಕಚೇರಿಯ ಸಹಾಯವಾಣಿ ಸಂಖ್ಯೆ ೭೮೪೮೯೧೪೯೧೫, ತಮ್ಮ ಗ್ರಾಮದ ಖಾಸಗಿ ನಿವಾಸಿಯನ್ನು ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ತಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಅಥವಾ ನಾಡ ಕಚೇರಿ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಶಬನಾ ಎಂ.ಷೇಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net