ಬೆಳೆ ಸರ್ವೆ ವರದಿ ಕೇಂದ್ರಕ್ಕೆ ಕಳುಹಿಸಬೇಕಿತ್ತು..

K.S. Eshwarappa
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
Published on

ಶಿವಮೊಗ್ಗ: ರಾಜ್ಯದಲ್ಲಿ ಈ ಮಟ್ಟಿಗೆ ಭೀಕರ ಬರಗಾಲ ಹಿಂದೆಂದೂ ಆಗಿರಲಿಲ್ಲ. ರಾಜ್ಯದಲ್ಲಿ ಇಷ್ಟರ ವೇಳೆಗೆ ಬೆಳೆ ಸರ್ವೆ ಆಗಿ ಕೇಂದ್ರಕ್ಕೆ ವರದಿ ಕಳಿಸಬೇಕಿತ್ತು. ಆದರೆ ಸರ್ಕಾರ ಇನ್ನೂ ಮಾಹಿತಿ ಕಲೆಹಾಕುವ ಕಾರ್ಯದಲ್ಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.

ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು, ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಇದನ್ನು ಸ್ವತಃ ಹೇಳಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಕೇಂದ್ರ ಮಾರ್ಗಸೂಚಿ ಬದಲಾಯಿಸಲಿ ಅಂತ ಹೇಳುತ್ತಿದ್ದಾರೆ. ಮೊದಲು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಬೇಕಿದೆ. ಆದರೆ, ಬಾಯಿಗೆ ಬಂದಂತೆ ಹೇಳಿಕೆ ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.
ಸರ್ಕಾರ ಇನ್ನೂ ಗ್ಯಾರಂಟಿ ಚಿಂತನೆಯಲ್ಲಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಮೂಲಕ ಗೆಲ್ಲುವ ಕನಸಿನಲ್ಲಿದೆ. ಕೇಂದ್ರದಿಂದ ಅನುದಾನ ತರುವಲ್ಲಿ ಬಿಜೆಪಿ ಸಂಪೂರ್ಣ ಬೆಂಬಲಿಸಲಿದೆ. ಮೊದಲು ಟೀಕೆ ಬಿಟ್ಟು ಬೆಳೆ ಹಾನಿ ಮಾಹಿತಿ ಸಂಗ್ರಹಿಸಬೇಕು. ಹಣಕ್ಕಾಗಿ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದು ಸಚಿವ ಶಿವಾನಂದ ಪಾಟೀಲ ಹೇಳಿರುವುದು ದುರಾದೃಷ್ಟ. ಬೇಜವಾಬ್ದಾರಿ ಹೇಳಿಕೆ ನೀಡಿದ ಸಚಿವರನ್ನು ತಕ್ಷಣವೇ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net