ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನ

Oplus_0
ಯಳಂದೂರು ಪಟ್ಟಣದ ಬಳೇಪೇಟೆಯಲ್ಲಿ ಮುಸ್ಲಿಂ ಜನಾಂಗದ ಶಾದಿ ಮಹಲ್ ಕಾಮಗಾರಿಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು. ಪಪಂ ಅಧ್ಯಕ್ಷೆ ಲಕ್ಷ್ಮೀಮಲ್ಲು, ಉಪಾಧ್ಯಕ್ಷೆ ಶಾಂತಮ್ಮ ನಿಂಗರಾಜು ಇತರರು ಇದ್ದರು.
Published on

ಯಳಂದೂರು: ಕೊಳ್ಳೇಗಾಲ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ನೀಡಿದ್ದು ಕೋಟ್ಯಂತರ ರೂ. ಅನುದಾನ ನೀಡಲಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ಪಟ್ಟಣದ ಬಳೇಪೇಟೆಯ ಸೈಯದ್ ಮುರ್ತುಜಾ ಷಾ ಖಾದ್ರಿ ದರ್ಗಾದ ಬಳಿ ಶಾದಿಮಹಲ್ ಕಟ್ಟಡಕ್ಕೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕೊಳ್ಳೇಗಾಲದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಮುಸ್ಲಿಮರ ಶಾದಿಮಹಲ್ ಕಾಮಗಾರಿ ಪೂರ್ಣಗೊಳಿಸಲು ನೀಡಲಾಗಿದೆ. ಯಳಂದೂರು ಪಟ್ಟಣದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಶಾದಿಮಹಲ್ ಕಟ್ಟಡಕ್ಕೆ ನೀಡಲಾಗಿದೆ. ಕೊಳ್ಳೇಗಾಲದಲ್ಲಿ ಅಲ್ಪಸಂಖ್ಯಾತರಿಗೆ ಮುರಾರ್ಜಿದೇಸಾಯಿ ವಸತಿ ಶಾಲೆ ನಿರ್ಮಾಣ ಮಾಡಲು ಅನುದಾನ ಲಭಿಸಿದೆ. ಇದಕ್ಕೆ ಈಗಾಗಲೇ 15 ಎಕೆರೆ ಜಮೀನನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆಯಡಿ 32.5 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ ಹಾಗೂ 12.5 ಕೋಟಿ ರೂ.ಗಳನ್ನು ಗ್ರಾಮೀಣ ರಸ್ತೆ, ಇತರ ಕಾಮಗಾರಿಗಳಿಗೆ ಬಳಸಿಕೊಳ್ಳಲು ತೀರ್ಮಾನ ಮಾಡಲಾಗಿದೆ. ನೀರಾವರಿ ಯೋಜನೆಗೆ 120 ಕೋಟಿ ರೂ. ಅನುದಾನ ಲಭಿಸಿದೆ. ಇಡೀ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾನು ಕಂಕಣಬದ್ಧನಾಗಿದ್ದೇನೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಜಿಪಂ ಮಾಜಿ ಉಪಾಧ್ಯಕ್ಷೆ ಜೆ. ಯೋಗೇಶ್, ಮುಸ್ಲಿಂ ಜನಾಂಗದ ಮುಖಂಡ ನಯಾಜ್ ಖಾನ್, ಮಾಂಬಳ್ಳಿ ಮುಜ್ಜು , ಕೊಳ್ಳೇಗಾಲ ನಗರಸಭಾ ಸದಸ್ಯ ಅನ್ಸರ್ ಬೇಗ್ ಮಾತನಾಡಿದರು. ಪಪಂ ಅಧ್ಯಕ್ಷೆ ಲಕ್ಷ್ಮೀಮಲ್ಲು, ಉಪಾಧ್ಯಕ್ಷೆ ಶಾಂತಮ್ಮ ನಿಂಗರಾಜು, ಸದಸ್ಯರಾದ ಮಹೇಶ್, ವೈ.ಜಿ.ರಂಗನಾಥ, ಬಿ.ರವಿ, ಸುಶೀಲಾ ಪ್ರಕಾಶ್, ನಾಮನಿರ್ದೇಶಿತ ಸದಸ್ಯರಾದ ಲಿಂಗರಾಜಮೂರ್ತಿ, ಶ್ರೀಕಂಠಸ್ವಾಮಿ, ಮುನವ್ವರ್‌ಬೇಗ್, ಮುಖ್ಯಾಧಿಕಾರಿ ಎಂ.ಪಿ.ಮಹೇಶ್‌ಕುಮಾರ್, ಕೆಆರ್‌ಐಡಿಎಲ್‌ನ ಚಿಕ್ಕಲಿಂಗಯ್ಯ, ಚಾಮುಲ್ ನಿರ್ದೇಶಕ ಕಮರವಾಡಿ ರೇವಣ್ಣ, ಮುಖಂಡರಾದ ಕಂದಹಳ್ಳಿ ನಂಜುಂಡಸ್ವಾಮಿ, ಜೆ.ಶ್ರೀನಿವಾಸ್, ಕಿನಕಹಳ್ಳಿ ಪ್ರಭುಪ್ರಸಾದ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net