ಆಳ್ವಾಸ್ ಕಾಲೇಜು ಚಾಂಪಿಯನ್ : ಕ್ರಾಸ್‌ಕಂಟ್ರಿಯಲ್ಲಿ ಸತತ 21ನೇ ವರ್ಷದಿಂದ ಓಟಗಾರರ ಸಾಧನೆ

New Project (14)
Published on

ಮೂಡುಬಿದಿರೆ: ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಕ್ರಾಸ್‌ಕಂಟ್ರಿ ಚಾಂಪಿಯನ್‌ಷಿಪ್‌ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಚಾಂಪಿಯನ್ ಆಗಿ ಸಮಗ್ರ ಪ್ರಶಸ್ತಿ ಪಡೆದಿದೆ.

ಪುರುಷರ ವಿಭಾಗದಲ್ಲಿ ಮೊದಲ 5 ಸ್ಥಾನಗಳನ್ನು ಆಳ್ವಾಸ್ ಕಾಲೇಜಿನ ಓಟಗಾರರು ಪಡೆದಿದ್ದಾರೆ. ಆಳ್ವಾಸ್ ಕಾಲೇಜಿನ ಮೋಹಿತ್(ಪ್ರಥಮ), ಆದೇಶ್ ಕುಮಾರ್(ದ್ವಿತೀಯ), ಶುಭಂ(ತೃತೀಯ), ರೋಹಿತ್(4ನೇ ಸ್ಥಾನ), ಹರೇಂದ್ರ(5ನೇ ಸ್ಥಾನ) ಪಡೆದು ಸತತ 21ನೇ ವರ್ಷ ಕುರುಂಜಿ ವಿಶ್ವನಾಥ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿ ಪಡೆದರು.

ಮಹಿಳೆಯರ ವಿಭಾಗದಲ್ಲಿ ಮೊದಲ 6 ಸ್ಥಾನಗಳನ್ನು ಆಳ್ವಾಸ್ ಕಾಲೇಜು ಓಟಗಾರರು ಪಡೆದುಕೊಂಡರು. ತಮಿಶಿ(ಪ್ರಥಮ), ನಿರ್ಮಲಾ(ದ್ವಿತೀಯ), ಭಾಗೀರಥಿ(ತೃತೀಯ), ಯಶಿ(4ನೇ ಸ್ಥಾನ), ಜ್ಯೋತಿ(5ನೇ ಸ್ಥಾನ), ಮನೀಷಾ(6ನೇ ಸ್ಥಾನ) ಪಡೆದು ಸತತ 21ನೇ ವರ್ಷ ಕೈಕುರೆ ಶ್ರೀ ರಾಮಣ್ಣ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿ ಪಡೆದರು. ವಿದ್ಯಾರ್ಥಿಗಳನ್ನು ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net