

ಮೈಸೂರು: ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸ ಶುಕ್ರವಾರ ಚಟುವಟಿಕೆಯ ಕೇಂದ್ರವಾಗಿತ್ತು.
ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ನಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಸಿದ್ದರಾಮಯ್ಯ ಅವರ ಬಳಿ ಚರ್ಚೆ ನಡೆಸಿದರು. ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಸೇರಿದಂತೆ ಹಲವು ಮುಖಂಡರು ಟಿಕೆಟ್ ಬೇಡಿಕೆ ಇಟ್ಟರು.