ಶಿವನ ದೇಗುಲಗಳಲ್ಲಿ ಭಕ್ತರ ದಂಡು

8sor9
ಸೊರಬ ಚಂದ್ರಗುತ್ತಿಯ ಶ್ರೀ ಈಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.
Published on

ಸೊರಬ: ತಾಲೂಕಿನ ಚಂದ್ರಗುತ್ತಿ ಈಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ದೇವರಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ವಿಧಿವತ್ತಾಗಿ ಶುಕ್ರವಾರ ಜರುಗಿದವು.

ಚಂದ್ರಗುತ್ತಿ ಸೇರಿದಂತೆ ಸುತ್ತಲಿನ ಹತ್ತಾರು ಗ್ರಾಮಗಳ ನೂರಾರು ಭಕ್ತರು ಆಗಮಿಸಿ ಈಶ್ವರನ ದರ್ಶನಾಶೀರ್ವಾದ ಪಡೆದರು. ಬೆಳಗ್ಗೆ ವಿಶೇಷ ಪೂಜೆ, ರುದ್ರಾಭಿಷೇಕ ನಂತರ ಪ್ರಸಾದ ವಿತರಣೆ ನಡೆಯಿತು. ಹಬ್ಬದ ಕಾರಣದಿಂದ ಶಿವನ ದೇವಾಲಯಗಳಿಗೆ ಭಕ್ತರ ದಂಡೇ ಹರಿದು ಬಂದಿತ್ತು. ಗ್ರಾಮದ ರಥಬೀದಿಯಲ್ಲಿರುವ ಶಿವಾಲಯ ಮಾತ್ರವದಲ್ಲದೇ ಸುತ್ತಲಿನ ಗ್ರಾಮಗಳಲ್ಲಿನ ರಾಮೇಶ್ವರ ದೇವಸ್ಥಾನ ಹಾಗೂ ಶಿವಾಲಯಗಳಲ್ಲಿಯೂ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಉಪವಾಸ ವ್ರತ ಆಚರಿಸಿದ ಭಕ್ತರು ಶಿವಾಲಯಗಳಲ್ಲಿ ಜಾಗರಣೆ ಮತ್ತು ಭಜನಾ ಕಾರ್ಯಗಳನ್ನು ನಡೆಸಿ, ಶಿವ ನಾಮ ಜಪಿಸುತ್ತಾ ಭಕ್ತಿಯಲ್ಲಿ ಮಿಂದೆದ್ದರು.
ಶುಕ್ರವಾರದ ಹಿನ್ನೆಲೆಯಲ್ಲಿ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬೆ ದೇವಸ್ಥಾನಕ್ಕೂ ಸಾವಿರಾರು ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಆವರಣದಲ್ಲಿರುವ ಕಾಲಭೈರವ, ಪರಶುರಾಮ, ತ್ರಿಶೂಲದ ಭೈರಪ್ಪ ಸೇರಿದಂತೆ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net