ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ

27 CRP-2A
Published on

ಚನ್ನರಾಯಪಟ್ಟಣ:  ತಾಲೂಕು ಆಡಳಿತ ಹಾಗೂ ತಾಲೂಕು ಒಕ್ಕಲಿಗರ ಸಂಘದಿಂದ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಅದ್ದೂರಿ ಮೆರವಣಿಗೆ ಶುಕ್ರವಾರ ಅದ್ದೂರಿಯಾಗಿ ಜರುಗಿತು.

ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿದೆಡೆಯಿಂದ ಆಗಮಿಸಿದ್ದ ಸಾವಿರಾರು ಮಂದಿ ಒಕ್ಕಲಿಗ ಸಮುದಾಯದವರು ನಗರದ ಪ್ರಮುಖ ಬೀದಿಗಳಲ್ಲಿ ಕೆಂಪೇಗೌಡರ ಅದ್ದೂರಿ ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ನಾಡಪ್ರಭು ಕೆಂಪೇಗೌಡರ ಜಯಂತಿಯ ಅಂಗವಾಗಿ ಪಟ್ಟಣದ ಎಪಿಎಂಸಿ ಆವರಣದಲ್ಲಿ  ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಅವರ ಭಾವಚಿತ್ರಕ್ಕೆ ಶಾಸಕ ಸಿ.ಎನ್. ಬಾಲಕೃಷ್ಣ ಸೇರಿದಂತೆ ಗಣ್ಯರು ಪುಷ್ಪ ನಮನ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು .ಅಶ್ವರೂಡ ಕೆಂಪೇಗೌಡರ ವೇಷದಾರಿ ಸೇರಿದಂತೆ ತಾಲ್ಲೂಕಿನ ನಾನಾ ಗ್ರಾಮಗಳಿಂದ ಆಗಮಿಸಿದ್ದ ಕೆಂಪೇಗೌಡರ ವೇಷ ಭೂಷಣಗಳೊಂದಿಗೆ ಅಲಂಕರಿಸಿದ್ದ ಟ್ರ್ಯಾಕ್ಟರ್‌ಗಳು, ಮೆರವಣಿಗೆಗೆ ಡೊಳ್ಳು ಕುಣಿತ, ಗಾರುಡಿ ಗೊಂಬೆ, ಕೀಲು ಕುದುರೆ, ಪೂಜಾ ಕುಣಿತ, ಪಟ ಕುಣಿತ, ನಾಸಿಕ್ ಡೋಲ್, ತಮಟೆ ಮತ್ತಿತರ ಕಲಾ ತಂಡಗಳು ಮೆರವಣಿಗೆಗೆ ಕಳೆ ನೀಡಿದ್ದವು.

ಮೆರವಣಿಗೆಯಲ್ಲಿ ಜಾನಪದ ಮತ್ತು ಸಾಂಸ್ಕೃತಿಕ ತಂಡಗಳು  ಮತ್ತು ನಾಡಪ್ರಭು ಕೆಂಪೇಗೌಡರ ಭಾವಚಿತ್ರವನ್ನು ಹೊತ್ತ ಅಲಂಕೃತ ರಥವು ಸಾಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net