ಕಂಪ್ಯೂಟರ್ ಪ್ರಯೋಗಾಲಯ ಆರಂಭ

29 CRP-1A,
Published on

ಚನ್ನರಾಯಪಟ್ಟಣ:  ಚನ್ನರಾಯಪಟ್ಟಣದ ಗೂರಮಾರನಹಳ್ಳಿ ಶ್ರೀ ರಾಮನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ತಂತ್ರಜ್ಞಾನ ನೆರವಿನ ಕಲಿಕಾ ಕಾರ್ಯಕ್ರಮ ಯೋಜನೆಯಡಿ ನೀಡಿರುವ ಕಂಪ್ಯೂಟರ್ ಪ್ರಯೋಗಾಲಯವನ್ನು ಶಾಸಕ ಸಿ.ಎನ್.ಬಾಲಕೃಷ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ  ಇಂದು ಕಂಪ್ಯೂಟರ್ ಜ್ಞಾನ ಅತ್ಯಗತ್ಯ ಎಂದರು.ಬಿಇಒ ದೀಪಾ  ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಹಲವಾರು ಸೌಲಭ್ಯಗಳು ಮಕ್ಕಳಿಗೆ ಸಿಗುತ್ತಿದ್ದರೂ ಪಾಲಕರು ತಮ್ಮ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುವುದು ಬೇಸರದ ಸಂಗತಿಯಾಗಿದೆ ಎಂದರು. ಡಯಟ್ ಉಪನ್ಯಾಸಕ ಸಿ.ಕೃಷ್ಣಗೌಡ ಮಾತನಾಡಿದರು. ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಎನ್.ಅನಿಲ್, ಮುಖ್ಯಶಿಕ್ಷಕಿ ಬಿ.ಎನ್.ಗೀತಾ, ಟಿಎಪಿಸಿಎಂಎಸ್ ಅಧ್ಯಕ್ಷ ಕುಮಾರ್, ಪುರಸಭಾ ಸದಸ್ಯ ಜಿ.ಆರ್. ಸುರೇಶ್, ಶಿಕ್ಷಣ ಸಂಯೋಜಕ ಲೋಕೇಶ್, ಶ್ರೀನಿವಾಸ್, ಕರಿಯಪ್ಪ ಗೌಡ, ಶಿವಾನಂದ್, ಸಿಆರ್‌ಪಿ ಮಲ್ಲೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net