

ಮುಳಬಾಗಿಲು: ಛತ್ತೀಸ್‌ಗಢದಲ್ಲಿ ಸಿಆರ್‌ಪಿಎಫ್ ಯೋಧರಾಗಿದ್ದ ಮುಳಬಾಗಿಲು ಮೂಲದ ಎಂ.ವೆಂಕಟರವಣಪ್ಪ (53) ತೀವ್ರ ಹೃದಯಾಘಾತಕ್ಕೊಳಗಾಗಿ ಗುರುವಾರ ಮೃತಪಟ್ಟಿದ್ದಾರೆ.
ಶುಕ್ರವಾರ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಸ್ವಗ್ರಾಮ ಅಳಗನಹಳ್ಳಿಗೆ ಪಾರ್ಥಿವ ಶರೀರ ತರಲಾಯಿತು. ಮುಳಬಾಗಿಲು ತಾಲೂಕಿನ ಉತ್ತನೂರು ಗ್ರಾಪಂ ವ್ಯಾಪ್ತಿಯ ಅಳಗನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿತು.
ಸಂಸದ ಎಸ್.ಮುನಿಸ್ವಾಮಿ, ಜಿಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಸದಸ್ಯ ವಿ.ಎಸ್.ಅರವಿಂದ್‌ಕುಮಾರ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಉತ್ತನೂರು ಶ್ರೀನಿವಾಸ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಕೆ.ವಾಸುದೇವ, ತಹಸೀಲ್ದಾರ್ ಕೆ.ಎನ್.ರಾಜಶೇಖರ್, ಡಿವೈಎಸ್‌ಪಿ ಬಿ.ಕೆ.ಉಮೇಶ್, ಸರ್ಕಲ್ ಇನ್‌ಸ್ಪೆಕ್ಟರ್ ಎಸ್.ಟಿ.ಮಾರ್ಕೊಂಡಯ್ಯ ಇತರರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.