

ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದ.ಕ ಜಿಲ್ಲೆಗೆ ತಲಾ 80ರಿಂದ 100 ಮಂದಿ ಇರುವ ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್‌ಪಿಎಫ್) ಒಟ್ಟು 8 ತುಕಡಿಗಳು ಮಂಗಳವಾರ ರಾತ್ರಿ ಆಗಮಿಸಿವೆ.
ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಗೆ ನಾಲ್ಕು ಹಾಗೂ ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗುವುದು. ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಒಂದು ತುಕಡಿಯಂತೆ ನಿಯೋಜಿಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ನಾಲ್ಕು ತುಕಡಿ ಆಗಮಿಸುವ ನಿರೀಕ್ಷೆ ಇದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಮತ್ತು ಎಸ್‌ಪಿ ಡಾ.ವಿಕ್ರಮ್ ಅಮಟೆ ತಿಳಿಸಿದ್ದಾರೆ.