ಧರ್ಮದ ಉಳಿವಿಗಾಗಿ ಧರ್ಮಯುದ್ಧ ;ಬಿಜೆಪಿ ನಗರ ಘಟಕದಿಂದ ಪ್ರತಿಭಟನೆ

raichur
raichur
Published on

ರಾಯಚೂರು ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ನಗರ ಘಟಕದಿಂದ ‘‘ಧರ್ಮದ ಉಳಿವಿಗಾಗಿ ಧರ್ಮಯುದ್ಧ ’’ ಘೋಷ್ಯವಾಕ್ಯದಡಿ ಮಂಗಳವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.

ಧರ್ಮಸ್ಥಳ ಶ್ರೀ ಮಂಜುನಾಥನ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿ ಅಪ್ರಚಾರ ಮಾಡುತ್ತಿರುವುದನ್ನು ಖಂಡಿಸಿದರು. ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡಿ ಷಡ್ಯಂತ್ರ ನಡೆಸುತ್ತಿದ್ದು, ಅನಾಮಿಕ ವ್ಯಕ್ತಿಯಿಂದ ಯಾವುದೇ ಆಧಾರಗಳಿಲ್ಲದೆ ಲಕ್ಷಾಂತರ ರೂ.ಖರ್ಚು ಮಾಡಿ ಗುಂಡಿಗಳನ್ನು ಅಗೆಯುತ್ತಿದ್ದು ಇದರಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ಅನಾಮಿಕನ ಹಿಂದೆ ಇರುವವರು ಯಾರೆಂದು ಸರ್ಕಾರ ಸ್ಪಷ್ಟ ಪಡಿಸಬೇಕಾಗಿದೆ, ಧಾರ್ಮಿಕ ಕ್ಷೇತ್ರಗಳನ್ನು ಅವಮಾನಿಸುತ್ತಿರುವ ಸಮಾಜ ಘಾತುಕರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ರಾಜ್ಯದಲ್ಲಿ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆ ತರುವ ಕೆಲಸ ನಿರಂತರವಾಗಿ ನಡೆಯುತ್ತಿದ್ದು, ಇಂತಹ ದುಷ್ಕೃತ್ಯಗಳನ್ನು ತಡೆಯುವಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿ ವಿಫಲರಾಗಿದ್ದು, ಕೂಡಲೇ ಕ್ಷಮೆಯಾಚಿಸಬೇಕೆಂದು ಅಗ್ರಹಿಸಿದರು.

ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷರ ಉಟ್ಕೂರು ರಾಘವೇಂದ್ರ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಂತೋಷ ರಾಜಗೂರು, ಶಿವಬಸಪ್ಪ ಮಾಲೀ ಪಾಟೀಲ್,ಕಡಗೋಲ್ ಆಂಜನೇಯ, ರಾಜಕುಮಾರ, ರಾಮಚಂದ್ರ ಕಡಗೋಲ್, ವಿಜಯಕುಮಾರ್ ಸಜ್ಜನ, ಸುಲೋಚನಾ ಬಸವರಾಜ,ವಿಪಿ ರೆಡ್ಡಿ,ಬಂಡೇಶ ವಲ್ಕಂದಿನ್ನಿ, ಬಂಗಿ ನರಸರೆಡ್ಡಿ, ಎನ್.ಕೆ. ನಾಗರಾಜ್, ನರಸಪ್ಪ ಯಾಕ್ಲಾಸಪುರ, ಸುಮಾ ಗಸ್ತಿ, ಶಶಿರಾಜ್ ಮಸ್ಕಿ, ಶಿವಕುಮಾರ್ ಪೊಲೀಸ್ ಪಾಟೀಲ್, ನಾಗರಾಜ್ ಬಾಲ್ಕಿ, ನಾಗವೇಣಿ. ಸಂಗೀತ ಸೇರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net